ಕೊಡಗು: ಜಿಲ್ಲೆಯ ಕುಶಾಲನಗರದ ಕೊಪ್ಪ ಬಳಿ ಕಾರಂಜಿಯಂತೆ ನೀರು ಉಕ್ಕುತ್ತಿರುವ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.
ಜಿಲ್ಲೆಯಾದ್ಯಂತ ಮುಂಗಾರು ಭಾರೀ ಚುರುಕಾಗಿದ್ದು, ಮಳೆಯ ರೌದ್ರ ನರ್ತನಕ್ಕೆ ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆಯಾಗಿದೆ. ಇದರ ಬೆನ್ನಲ್ಲೇ ಈ ವೀಡಿಯೋ ಭಾರೀ ಸದ್ದು ಮಾಡುತ್ತಿದೆ.
ಈ ಬಗ್ಗೆ ʼಕೂರ್ಗ್ ದಿ ಕಾಶ್ಮೀರ್ ಆಫ್ ಕರ್ನಾಟಕʼ ಎಂಬ ಎಕ್ಸ್ ಖಾತೆಯಲ್ಲಿ ವಿಡಿಯೋ ಹಂಚಿಕೆಯಾಗಿದ್ದು, ನೀರು ಉಕ್ಕುತ್ತಿರುವ ದೃಶ್ಯ ಎಲ್ಲರ ಹುಬ್ಬೇರಿಸುವಂತಿದೆ.
ಆವರ್ತಿಯಿಂದ ಮುಳಸೋಗೆ ಮಾರ್ಗದ ರಸ್ತೆ ಬದಿಯಲ್ಲಿ ನೀರು ಉಕ್ಕುತ್ತಿರುವ ದೃಶ್ಯ ಕಂಡುಬಂದಿದೆ. ಒಂದು ಮರದ ಎತ್ತರಕ್ಕೆ ನೀರು ಚಿಮ್ಮುತ್ತಿರುವ ದೃಶ್ಯ ಸ್ಥಳೀಯರೊಬ್ಬರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಉಕ್ಕಿ ಹರಿಯುತ್ತಿರುವ ನೀರು ನದಿಗೆ ಸೇರುತ್ತಿದ್ದು, ಈ ಭಾಗದಲ್ಲಿ ಕೆಲಕಾಲ ಪ್ರಯಾಣ ಸ್ಥಗಿತವಾಗಿತ್ತು.
ಮಳೆ ನೀರಿನಿಂದ ಭೂಮಿಯಲ್ಲಿ ಚಿಮ್ಮಿರಬಹುದು ಎಂದು ಕೆಲವರು ಹೇಳಿದರೇ, ಮತ್ತೆ ಕೆಲವರು ಕೆರೆಗಳಿಗೆ ನೀರು ತುಂಬಿಸುವ ಪೈಪ್ ಹೊಡೆದು ಹೋಗಿದ್ದು, ನೀರು ಮರದೆತ್ತರಕ್ಕೆ ಚಿಮ್ಮುತ್ತಿದೆ ಆ ಮೂಲಕ ನೀರು ಪೋಲಾಗುತ್ತಿದೆ ಎಂದು ಕೆಲವರು ಆಕ್ರೋಶ ಹೊರಹಾಕಿದ್ದಾರೆ.
ಚಾ.ನಗರದಲ್ಲಿ ಅಂತಾರಾಷ್ಟ್ರೀಯ ಬೌದ್ಧ ಸಮ್ಮೇಳನ ನಡೆಯಲಿರುವ ಹಿನ್ನೆಲೆಯಲ್ಲಿ ಪ್ರಚಾರ ಮಾಡಲಿರುವ ವಾಹನಗಳು ಚಾಮರಾಜನಗರ : ಧಮ್ಮ ಪಯಣ ಜಾಗೃತಿ ಜಾಥಾದ…
ಮೈಸೂರು ದಸರಾ ಎಂದರೆ ಜಂಬೂಸವಾರಿ, ಅರಮನೆಯ ದೀಪಾಲಂಕಾರ, ಸಂಗೀತ-ನೃತ್ಯ ಕಾರ್ಯಕ್ರಮಗಳು, ಯುವ ದಸರಾ, ಆಹಾರ ಮೇಳ, ವಸ್ತುಪ್ರದರ್ಶನ ಮಾತ್ರವಲ್ಲ. ಕಳೆದ…
ಕೆ. ಬಿ. ರಮೇಶನಾಯಕ ಮೈಸೂರು: ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಮೆರವಣಿಗೆಯಲ್ಲಿ ಸಾಗಲಿರುವ ಗಜಪಡೆಯ ಹೊಸ ಸಾರಥಿಯ ಆಯ್ಕೆಗಾಗಿ…
ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಮತ್ತು ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ 2016ನೇ ಬ್ಯಾಚ್‌ನ…
ಬೆಂಗಳೂರು : ಸಾರ್ವಜನಿಕರಿಂದ ವ್ಯಕ್ತವಾದ ತೀವ್ರ ವಿರೋಧ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ವಿವಾದಿತ ‘ಸರ್ಕಾರಿ ಉದ್ಯಾನವನಗಳ (ಸಂರಕ್ಷಣೆ) (ತಿದ್ದುಪಡಿ)…