ಮಡಿಕೇರಿ: ಪತ್ನಿಯನ್ನು ಬರ್ಬರವಾಗಿ ಗುಂಡಿಕ್ಕಿ ಹತ್ಯೆ ಮಾಡಿ ಪತಿ ಪೊಲೀಸರಿಗೆ ಶರಣಾದ ಘಟನೆ ವಿರಾಜಪೇಟೆ ಹೊರವಲಯದ ಬೇಟೋಳಿ ಗ್ರಾಮದಲ್ಲಿ ಜರುಗಿದೆ.
ಶಿಲ್ಪ ಸೀತಮ್ಮ (36)ಮೃತಪಟ್ಟ ಮಹಿಳೆ. ನಾಯಕಂಡ ಬೋಪಣ್ಣ (45)ಹತ್ಯೆ ಬಳಿಕ ಪೊಲೀಸರಿಗೆ ಶರಣಾದ ಆರೋಪಿ.
ನಿನ್ನೆ(ಜು.19) ರಾತ್ರಿ ಶಿಲ್ಪ ಸೀತಮ್ಮ ಬೇರೊಬ್ಬರ ದೂರವಾಣಿ ಕರೆ ಸ್ವೀಕರಿಸಿ ಮಾತನಾಡಿದ್ದರು. ಇದನ್ನು ಆಕ್ಷೇಪಿಸಿದ ಪತಿ ನಾಯಕಂಡ ಬೋಪಣ್ಣ, ಈ ವಿಚಾರವಾಗಿ ರಾತ್ರಿಯೆಲ್ಲ ಜಗಳ ನಡೆಸಿ ಇಂದು(ಜು.20) ಬೆಳಗ್ಗೆ ಗುಂಡಿಕ್ಕಿ ಹತ್ಯೆಗೈದಿದ್ದಾನೆ ಎಂದು ಹೇಳಲಾಗಿದೆ.
ಶಿಲ್ಪ ಸೀತಮ್ಮ 2012 ರಿಂದ 2017 ರವರೆಗೆ ಬೇಟೋಳಿ ಗ್ರಾಮ ಪಂಚಾಯತಿ ಸದಸ್ಯರಾಗಿದ್ದರು. ಹತ್ಯೆ ಬಳಿಕ ಆರೋಪಿ ಬೋಪಣ್ಣ ಪೊಲೀಸ್ ಠಾಣೆಗೆ ಕೋವಿಯೊಂದಿಗೆ ಶರಣಾಗಿದ್ದಾನೆ. ಘಟನಾ ಸ್ಥಳಕ್ಕೆ ವಿರಾಜಪೇಟೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…
ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…
ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…
ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…
ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…