ಸಿದ್ದಾಪುರ : ಕಾಡುಕೋಣ ಡಿಕ್ಕಿ ಹೊಡೆದ ಪರಿಣಾಮ ವಾಹನ ಪಲ್ಟಿಯಾದ ಘಟನೆ ಸಮೀಪದ ಕರಡಿಗೋಡು ಗ್ರಾಮದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.
ಕಾಫಿ ತೋಟದಿಂದ ಏಕಾಏಕಿ ರಸ್ತೆ ದಾಟಲು ಬಂದ ಕಾಡುಕೋಣ ಕರಡಿಗೋಡು ಸರ್ಕಾರಿ ಶಾಲೆಯ ಕೊಠಡಿ ನಿರ್ಮಾಣ ಕಾಮಗಾರಿಗೆ ತೆರಳುತ್ತಿದ್ದ ವಾಹನಕ್ಕೆ ಅಡ್ಡ ಬಂದಿದೆ. ವಾಹನಕ್ಕೆ ಕಾಡುಕೋಣ ಡಿಕ್ಕಿಯಾದ ಪರಿಣಾಮ ಗೂಡ್ಸ್ ವಾಹನ ಸಂಪೂರ್ಣ ಜಖಂಗೊಂಡಿದೆ. ವಾಹನದ ಚಾಲಕ ಹಾಗೂ ಓರ್ವ ಕಾರ್ಮಿಕ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ವಿಷಯ ತಿಳಿದು ವಿರಾಜಪೇಟೆ ವಲಯ ಅರಣ್ಯ ಸಂರಕ್ಷಣಾಧಿಕಾರಿ ಶಿವರಾಂ, ಉಪವಲಯ ಅರಣ್ಯಧಿಕಾರಿ ಸಂಜೀತ್ ಸೋಮಯ್ಯ, ತಿತಿಮತಿ ವಲಯ ಅರಣ್ಯ ಸಂರಕ್ಷಣಾಧಿಕಾರಿ ಗಂಗಾಧರ್, ಆನೆ ಚೌಕೂರು ವಲಯ ಅರಣ್ಯ ಸಂರಕ್ಷಣಾಧಿಕಾರಿ ದೆವರಾಜ್ ಮತ್ತು ಆರ್‌ಆರ್‌ಟಿ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗಾಯಗೊಂಡ ಕಾಡುಕೋಣಕ್ಕೆ ಆನೆಚೌಕೂರು ವನ್ಯ ಜೀವಿ ಸಂರಕ್ಷಣಾ ಕೇಂದ್ರದಲ್ಲಿ ಚಿಕಿತ್ಸೆ ನೀಡಲು ನಿರ್ದರಿಸಲಾಗಿದ್ದು, ಅಲ್ಲಿಗೆ ಕೊಂಡೊಯ್ಯಲಾಗಿದೆ.
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…
ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…