ಮಡಿಕೇರಿ: ಕಾಫಿ ತೋಟಕ್ಕೆ ತೆರಳುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ ನಡೆಸಿ ಗಾಯಗೊಳಿಸಿದ ಘಟನೆ ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಗ್ರಾಮದಲ್ಲಿ ನಡೆದಿದೆ.
ಬೊಮ್ಮಂಡ ನಾಚಪ್ಪ (74) ಎಂಬುವವರು ಕಾಡಾನೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದಾರೆ. ತಲೆ ಹಾಗೂ ಸೊಂಟದ ಭಾಗಕ್ಕೆ ಹೆಚ್ಚು ಪೆಟ್ಟಾಗಿದ್ದು, ಅಮ್ಮತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕರೆತರಲಾಗಿದೆ.
ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭೇಟಿ ನೀಡಿದರು. ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಮೇರಿಯಂಡ ಸಂಕೇತ್ ಪೂವಯ್ಯ ಆಸ್ಪತ್ರಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.