* ಘಟನಾ ಸ್ಥಳಕ್ಕೆ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯೆ ಸಂಕೇತ್ ಪೂವಯ್ಯ ಭೇಟಿ -ಕುಟುಂಬಸ್ಥರಿಗೆ ಸಾಂತ್ವನ
ಸಿದ್ದಾಪುರ : ಇಲ್ಲಿನ ಗ್ರಾಮ ಪಂಚಾಯಿತಿ ಸದಸ್ಯ ಜಯಂತ್ ರವರ ತಂದೆ ಸೊಳ್ಳೆ ಕೋಡಿ ಚಿಣ್ಣಪ್ಪ (76) ಎಂಬುವರು ಇಂದು ಬೆಳಗಿನ ಜಾವ 2 ಗಂಟೆ ಸಮಯಕ್ಕೆ ಕರಡಿಗೋಡುವಿನ ಬಸವನಹಳ್ಳಿ ಹಾಡಿ ಸಮೀಪದಲ್ಲಿರುವ ಮನೆಯಿಂದ ಹೊರಗೆ ಬಂದ ಸಂದರ್ಭ ಮನೆಯ ಮುಂಭಾಗದಲ್ಲಿದ್ದ ಕಾಡಾನೆ ಅವರ ಮೇಲೆ ದಿಢೀರ್ ದಾಳಿ ನಡೆಸಿದ ಪರಿಣಾಮ ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ನಡೆದಿದೆ.
ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ಬೆಳಗಿನ ಜಾವ ಸುಮಾರು 4 ಗಂಟೆಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮೃತರ ಕುಟುಂಬದವರಿಗೆ ಸಾಂತ್ವನವನ್ನು ಹೇಳಿದರು.
ನಂತರ 5 ಗಂಟೆ ಹೊತ್ತಿಗೆ ಮೃತದೇಹವನ್ನು ಪೊಲೀಸರು ಹಾಗೂ ಅರಣ್ಯ ಇಲಾಖೆಯವರು ಸಿದ್ದಾಪುರ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಿದ್ದಾರೆ.
ಸಿದ್ದಾಪುರ ಕಾಂಗ್ರೆಸ್ ಪಕ್ಷದ ಝೋನಲ್ ಅಧ್ಯಕ್ಷರಾದ ಎಸ್. ಬಿ ಪ್ರತೀಶ್ ವಲಯ ಅರಣ್ಯ ಅಧಿಕಾರಿ ರತನ್ ಹಾಗೂ ಸಿಬ್ಬಂದಿಗಳು, ಸಿದ್ದಾಪುರ ಠಾಣಾಧಿಕಾರಿ ಹಾಗೂ ಸಿಬ್ಬಂದಿಗಳು ಘಟನಾ ಸ್ಥಳದಲ್ಲಿ ಹಾಜರಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.
ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…
ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…
ಬೆಂಗಳೂರು : ನಗರದ ಹೊರವಲಯದ ಆನೇಕಲ್‌ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…
ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…
ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…
ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…