Mysore
27
broken clouds

Social Media

ಶುಕ್ರವಾರ, 02 ಅಕ್ಟೋಬರ್ 2026
Light
Dark

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ.

ಬಂಗಾಳ ಮೂಲದ ಇಬ್ಬರು ಕಾರ್ಮಿಕರ ಮೇಲೆ ಕಾಡಾನೆ ದಾಳಿ ಮಾಡಿದ್ದು, ಅನಿರೀಕ್ಷಿತ ದಾಳಿಗೆ ಒಬ್ಬ ಕಾರ್ಮಿಕ ಮೃತಪಟ್ಟಿದ್ದಾರೆ. ಮತ್ತೊಬ್ಬ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಗೊಂಡ ಕಾರ್ಮಿಕನಿಗೆ ಸಿದ್ದಾಪುರ ಸಮುದಾಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ, ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನು, ಕೇವಲ 8 ದಿನಗಳ ಅವಧಿಯಲ್ಲಿ 3 ಬಾರಿ ಕಾಡಾನೆ ದಾಳಿ ನಡೆದಿದ್ದು, 2 ಮಂದಿ ಮೃತಪಟ್ಟಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಕುಟುಂಬ ವರ್ಗದ ಆಕ್ರಂದನ ಮುಗಿಲುಮುಟ್ಟಿದೆ.

 

Tags:
error: Content is protected !!