ಕೊಡಗು

ಆಟೋ ಚಾಲಕ ಮೇಲೆ ಕಾಡಾನೆ ದಾಳಿಗೆ ಯತ್ನ

ಸುಂಟಿಕೊಪ್ಪ : ಆಟೋದಲ್ಲಿ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಸಂದರ್ಭದಲ್ಲಿ ಮಂಗಳವಾರ ಮುಂಜಾನೆ ೫.೩೦ರ ಸಂದರ್ಭದಲ್ಲಿ ಒಂಟಿ ಸಲಗವೊಂದು ತೋಟದಿಂದ ಹೆದ್ದಾರಿಗಿಳಿದು ದಾಳಿಗೆ ಯತ್ನಿಸಿದ್ದು, ಕೂದಲೆಳೆ ಅಂತರದಿಂದ ಆಟೋ ಚಾಲಕ ಹಾಗೂ ಪ್ರಯಾಣಿಕರು ಪಾರಾಗಿರುವ ಘಟನೆ ವರದಿಯಾಗಿದೆ.

ಬೆಳಿಗ್ಗೆ ೫.೩೦ರಲ್ಲಿ ಗದ್ದೆಹಳ್ಳದ ಗಿರಿಯಪ್ಪಮನೆ ನಿವಾಸಿ ಅಲಿ ಎಂಬವರು ತನ್ನ ಆಟೋ ರಿಕ್ಷಾದಲ್ಲಿ ಕೇರಳಕ್ಕೆ ತೆರಳುವ ಪ್ರಯಾಣಿಕರನ್ನು ಚೆಟ್ಟಹಳ್ಳಿಗೆ ಕರೆದೊಯ್ಯುತ್ತಿದ್ದ ಸಂದರ್ಭದಲ್ಲಿ ಪೊನ್ನತ್‌ಮೊಟ್ಟೆ ಬಳಿಯಲ್ಲಿ ಏಕಾಏಕಿ ತೋಟದಿಂದ ಒಂಟಿ ಸಲಗವೊಂದು ರಸ್ತೆಗಿಳಿದು ಆಟೋ ರಿಕ್ಷಾವನ್ನು ಕಂಡು ಬೆನ್ನಟ್ಟಿದೆ. ಚಾಲಕನ ಸಮಯ ಪ್ರಜ್ಞೆಯಿಂದ ವಾಹನವನ್ನು ಅತಿ ವೇಗವಾಗಿ ಚಲಾಯಿಸುವ ಮೂಲಕ ತಾನು ಹಾಗೂ ಪ್ರಯಾಣಿಕರ ಜೀವವನ್ನು ಉಳಿಸಿದ್ದಾರೆ.

ಈ ಭಾಗದಲ್ಲಿ ಪದೇ ಪದೇ ಕಾಡಾನೆಗಳು ರಸ್ತೆಯಲ್ಲಿ ಸಂಚರಿಸಿ ವಾಹನಗಳ ಮೇಲೆ ದಾಳಿ ನಡೆಸಿರುವ ಅದೆಷ್ಟೋ ಪ್ರಕರಣಗಳು ವರದಿಯಾಗಿವೆ. ಇದರಿಂದ ಈ ಭಾಗದ ನಿವಾಸಿಗಳು ಜೀವ ಭಯದಲ್ಲಿ ಸಂಚರಿಸುವಂತಾಗಿದೆ. ಸಂಬಂಧಿಸಿದ ಅರಣ್ಯಾಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ…

1 hour ago

ಕೆ.ಆರ್‌.ನಗರ: ಮಾಜಿ ಸಚಿವ ಸಾ.ರಾ. ಮಹೇಶ್ ಪುತ್ರ ಹಾಗೂ ಉದ್ಯಮಿ ಸಾ.ರಾ.ಜಯಂತ್‌ ಹುಟ್ಟುಹಬ್ಬ ಆಚರಣೆ

ಭೇರ್ಯ ಮಹೇಶ್:‌ ಕೆ.ಆರ್‌.ನಗರ ತಾಲ್ಲೂಕು ವರದಿಗಾರರು  ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…

2 hours ago

ಮಾ.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ: 140 ಬಸ್‌ಗಳ ಕಾರ್ಯಾಚರಣೆ

ಮಂಡ್ಯ: ಮಾರ್ಚ್.‌28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ವತಿಯಿಂದ 140 ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…

2 hours ago

ಎಚ್ಚರಿಕೆ ನೀಡಿದ್ದಕ್ಕೆ ಟ್ರಂಪ್‌ ಕದನ ವಿರಾಮ ಘೋಷಣೆ: ಇರಾನ್‌ ಖಡಕ್‌ ತಿರುಗೇಟು

ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್‌ ತಿರುಗೇಟು ನೀಡಿದೆ.…

3 hours ago

ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕ ಸಾವು

ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…

3 hours ago

ಕೆಪಿಎಸ್‌ಸಿ ಬದಲಿಗೆ ಕೆಇಎ ಮೂಲಕ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗೆ ನೇಮಕಾತಿ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…

3 hours ago