ಸಿದ್ದಾಪುರ : ಕಾಡಾನೆ ಕಾಡಿಗಟ್ಟುವ ಕಾರ್ಯಾಚರಣೆ ಸಂದರ್ಭ ಕಾಫಿ ತೋಟದಲ್ಲಿ ಬೀಡು ಬಿಟ್ಟಿದ್ದ ಕಾಡಾನೆಯೊಂದು ತೋಟ ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ಮಹಿಳೆಯ ಮೇಲೆ ದಾಳಿಗೆ ಯತ್ನಿಸಿದ ಘಟನೆ ಕುಶಾಲನಗರ ತಾಲ್ಲೂಕಿನ ನಲ್ವತ್ತೆಕ್ರೆ ಬಳಿ ನಡೆದಿದೆ.
ಕಾರ್ಮಿಕ ಮಹಿಳೆ ಕವಿತಾ (40) ಗಾಯಗೊಂಡವರು. ನೆಲ್ಯಹುದಿಕೇರಿ, ಅತ್ತಿಮಂಗಲ,ನಲ್ವತ್ತೆಕ್ರೆ ಭಾಗದಲ್ಲಿ ಬಿಡು ಬಿಟ್ಟಿದ್ದ ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಚರಣೆ ಅರಣ್ಯ ಇಲಾಖೆ ಸಿಬ್ಬಂದಿಗಳು ಕೈಗೊಂಡಿದ್ದರು.
ಬೆಳಗಿನಿಂದ ಹುಡುಕಾಟ ನಡೆಸಿದರೂ ಕಾಡನೆಗಳು ಮಾತ್ರ ಪತ್ತೆಯಾಗಿರಲಿಲ್ಲ. ಮಧ್ಯಾಹ್ನ ವೇಳೆಯಲ್ಲಿ ಕಾಫಿ ತೋಟ ಒಂದರಲ್ಲಿ ಒಂಟಿ ಸಲಗ ಕಾಣಿಸಿಕೊಂಡಿತ್ತು . ಅರಣ್ಯ ಇಲಾಖೆ ಸಿಬ್ಬಂದಿಗಳು ಕಾಫಿ ತೋಟಮಾರ್ಗ ಮಧ್ಯದಿಂದ ಅರಣ್ಯಕ್ಕೆ ಓಡಿಸಲು ಮುಂದಾಗಿದ್ದರು.
ಒಂದು ತೋಟದಿಂದ ಮತ್ತೊಂದು ತೋಟಕ್ಕೆ ಓಡಿದ ಕಾಡಾನೆ ನಂತರ ಮನೆಯೊಂದರ ಸಮೀಪದ ಹಲಸಿನ ಮರ ಬಳಿ ನಿಂತಿತ್ತು. ಈ ಸಂದರ್ಭ ಸಮೀಪದ ತೋಟದಲ್ಲಿ ಕೆಲಸ ನಿರ್ವಹಿಸಿ ಮನೆಗೆ ಬರುತ್ತಿದ್ದ ಮಹಿಳೆಯನ್ನ ಕಂಡ ಕಾಡಾನೆ ದಾಳಿಗೆ ಯತ್ನಿಸಿತ್ತು . ಕಾಡಾನೆದಾಳಿಯಿಂದ ತಪ್ಪಿಸಿಕೊಳ್ಳಲು ಓಡಿದ ಮಹಿಳೆ ಬಿದ್ದು ಗಂಭೀರ ಗಾಯಗೊಂಡರು.
ತಕ್ಷಣ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಹಾಗೂ ಸ್ಥಳೀಯರು ಮಹಿಳೆಯನ್ನ ಸಿದ್ದಾಪುರ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ದಾಖಲಿಸಿದ್ದರು. ಸ್ಥಳಕ್ಕೆ ಅರಣ್ಯ ಇಲಾಖೆಯ ಆರ್ ಎಫ್ ಓ ರತನ್ ಕುಮಾರ್ , ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹನೂರು : ಮಹದೇಶ್ವರ ಬೆಟ್ಟ ರಸ್ತೆಯಲ್ಲಿ ನಡೆದ ಹಿಟ್ ಅಂಡ್ ರನ್ ಪ್ರಕರಣದಲ್ಲಿ ಜಿಂಕೆಯೊಂದು ರಸ್ತೆಯಲ್ಲಿಯೇ ಮೃತಪಟ್ಟಿರುವ ಘಟನೆ ಭಾನುವಾರ…
ಹನೂರು : ತಾಲ್ಲೂಕಿನ ದೊಡ್ಡಾಲತ್ತೂರು, ಅಜ್ಜೀಪುರ ಸುತ್ತಮುತ್ತಲೂ ಜಿಎಸ್‌ಐ ಅಧಿಕಾರಿಗಳು ಚಿನ್ನದ ನಿಕ್ಷೇಪ ಇರುವ ಬಗ್ಗೆ ಅಧ್ಯಯನಕ್ಕೆ ಮುಂದಾಗುತ್ತಿದ್ದಂತೆ ಚಿನ್ನದಾಸೆಗಾಗಿ…
ಮೈಸೂರು : ಕ್ರಿಸ್‌ಮಸ್ ಮತ್ತು ಹೊಸ ವರ್ಷದ ಸಂಭ್ರಮಕ್ಕೆ ಮುನ್ನುಡಿಯಾಗಿ ಅರಮನೆ ಫಲಪುಷ್ಪ ಪ್ರದರ್ಶನ ಭಾನುವಾರದಿಂದ ವರ್ಣರಂಜಿತವಾಗಿ ಆರಂಭಗೊಂಡಿದೆ. ಮೈಸೂರು…
ಜೋಹಾನ್ಸ್‌ಬರ್ಗ್ : ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನ ಪಶ್ಚಿಮದಲ್ಲಿರುವ ಬೆಕರ್ಸ್‌ಡಾಲ್ ಪಟ್ಟಣದಲ್ಲಿ ಸಾಮೂಹಿಕ ಗುಂಡಿನ ದಾಳಿ ನಡೆದಿದೆ. ಈ ಸಾಮೂಹಿಕ ಗುಂಡಿನ…
ಎಚ್.ಡಿ.ಕೋಟೆ : ಹುಲಿ ದಾಳಿಯಿಂದ ತತ್ತರಿಸಿರುವ ತಾಲ್ಲೂಕಿನ ಜನತೆಗೆ ಇದೀಗ ಚಿರತೆ ದಾಳಿಯು ನಿದ್ದೆಗೆಡಿಸಿದೆ. ಪಟ್ಟಣದ ವಾರ್ಡ್ ನಂಬರ್ 21ರ…
ಚಾಮರಾಜನಗರ : ತಾಲ್ಲೂಕಿನ ಗಂಗವಾಡಿ ಗ್ರಾಮದ ಬಳಿ ಶನಿವಾರ ರಾತ್ರಿ ಜಮೀನಿನಲ್ಲಿ ಕಟ್ಟಿ ಹಾಕಿದ್ದ ಕರುಗಳ ಮೇಲೆ ಚಿರತೆ ದಾಳಿ…