ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ.
ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ ಹಿನ್ನೆಲೆಯಲ್ಲಿ, ಸಿದ್ದಾಪುರ ಸುತ್ತಮುತ್ತ ಅರಣ್ಯ ಇಲಾಖೆ ಕಾರ್ಯಾಚರಣೆ ಮುಂದುವರಿಸಿದೆ.
ದುಬಾರೆ ಶಿಬಿರದ ಪ್ರಶಾಂತ, ಸುಗ್ರೀವ, ಲಕ್ಷ್ಮಣ, ಧನಂಜಯ ಹಾಗೂ ಈಶ್ವರ ಎಂಬ ಐದು ಸಾಕಾನೆಗಳ ಸಹಕಾರದೊಂದಿಗೆ ಎಲಿಫ್ಯಂಟ್ ಟ್ರ್ಯಾಪಿಂಗ್ ಮತ್ತು ಸರ್ಚಿಂಗ್ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಅರಣ್ಯ ಅಧಿಕಾರಿಗಳು ಹಾಗೂ ಆರ್‌ಆರ್‌ಟಿ ಸಿಬ್ಬಂದಿ ಸೇರಿದಂತೆ 60ಕ್ಕೂ ಹೆಚ್ಚು ಮಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.
ಕಾವಡಿ, ಹಚ್ಚಿನಾಡು, ಕಣ್ಣಗಾಲ, ಹಾಲುಗುಂದ, ಬೈರಂಬಾಡ, ಯಡೂರು, ಕರಡಿಗೋಡು, ಅಮ್ಮತ್ತಿ ಹಾಗೂ ಗುಹ್ಯ ಗ್ರಾಮಗಳ ಸುತ್ತಮುತ್ತ ಕಾರ್ಯಾಚರಣೆ ನಡೆಯುತ್ತಿದೆ.
ಕಾರ್ಯಾಚರಣೆ ವೇಳೆ ಸಾರ್ವಜನಿಕರು ಪಟಾಕಿ ಸಿಡಿಸದಂತೆ ಅರಣ್ಯ ಇಲಾಖೆ ಸೂಚನೆ ನೀಡಿದೆ.
ಜನವರಿಯಿಂದ ಇಲ್ಲಿಯವರೆಗೆ ಎಂಟು ತಿಂಗಳಲ್ಲಿ ಕಾಡಾನೆ ದಾಳಿಗೆ ಎಂಟು ಮಂದಿ ಬಲಿಯಾಗಿದ್ದಾರೆ. ಕಳೆದ 10 ದಿನಗಳಲ್ಲಿ ಜಿಲ್ಲೆಯಲ್ಲಿ ಮೂರು ಕಾಡಾನೆ ದಾಳಿ ನಡೆದಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ.
ಈ ಹಿನ್ನೆಲೆಯಲ್ಲಿ ಸಿದ್ದಾಪುರ ವ್ಯಾಪ್ತಿಯ ಸುತ್ತಮುತ್ತ ಕಾಡಾನೆಗಳ ಸೆರೆ ಕಾರ್ಯಾಚರಣೆ ತೀವ್ರಗೊಂಡಿದೆ.
ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…
ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…
ತನ್ನ ಪ್ರಾಣವನ್ನೇ ಒತ್ತೆಯಿಟ್ಟು ದುಬೈನಿಂದ ಇಸ್ರೇಲ್‌ನ ಅವೀವ್‌ಗೆ ತೆರಳುತ್ತಿದ್ದ -ದುಬೈ ವಿಮಾನ ಹೈಜಾಕ್ ತಪ್ಪಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್…
ಡಾ . ಚೇತನ ಗುರುರಾಜು, ಮುಖ್ಯ ಶಿಕ್ಷಕಿ, ಅರಿವು ವಿದ್ಯಾಸಂಸ್ಥೆ, ಮೈಸೂರು ಸಾಮಾಜಿಕ ಮಾಧ್ಯಮಗಳ ಬಲೆಗೆ ಸಿಲುಕಿವೆ ಹಲವು ದೇಶಗಳು…
ಸ್ವಾವಲಂಬನೆಯ ಸಂಕೇತ ಮಹಾತ್ಮ ಗಾಂಧೀಜಿ ಮಹಾತ್ಮ ಗಾಂಧೀಜಿ ಅವರು ಭಾರತದ ಸ್ವಾತಂತ್ರ್ಯ ಹೋರಾಟದ ಮಹಾನ್ ನಾಯಕ ಹಾಗೂ ರಾಷ್ಟ್ರಪಿತ ಎಂದು…
ಪರಶುರಾಮ್, ನಿರ್ದೇಶಕರು, ಒಡನಾಡಿ ಸೇವಾ ಸಂಸ್ಥೆ ಗಾಂಧಿ ವಿಚಾರಗಳನ್ನು ಸಂವಾದದ ಮೂಲಕ ಮುನ್ನಡೆಸಲು ಸಾಧ್ಯವೇ? ಅಥವಾ ಅನುಸರಿಸಲು ಸಾಧ್ಯವಾಗದಿರುವ ನಡೆಯನ್ನು…