ಮಡಿಕೇರಿ: ಪೊನ್ನಂಪೇಟೆ ಪಟ್ಟಣದಲ್ಲಿ ಬೆಳಿಗ್ಗೆ 7 ಗಂಟೆ ಸುಮಾರಿಗೆ ಪೊನ್ನಂಪೇಟೆ ಮುಖ್ಯ ರಸ್ತೆಯ ರಾಮಕೃಷ್ಣ ರೈಸ್ ಮಿಲ್‌ನಲ್ಲಿ ಕಾಡಾನೆಯೊಂದು ಪ್ರತ್ಯಕ್ಷವಾಗಿದೆ. ನಂತರ ಆನೆ ಮುಖ್ಯ ರಸ್ತೆ ಮಾರ್ಗವಾಗಿ ಮುತ್ತಪ್ಪ ದೇವಸ್ಥಾನದ ಹಿಂಬದಿಯ ತೋಟಕ್ಕಾಗಿ ಅರಣ್ಯ ಮಹಾವಿದ್ಯಾಲಯದ ಸಮೀಪದ ಗದ್ದೆಯಲ್ಲಿ ಹಾದುಹೋಗಿದೆ.
ಇದೀಗ ಪೊನ್ನಂಪೇಟೆಯ ಪಟ್ಟಣದ ಸಮೀಪ ಈ ಆನೆ ಸುತ್ತಾಡುತ್ತಿದ್ದು ಸಾರ್ವಜನಿಕರು ಎಚ್ಚರದಿಂದ ಇರಬೇಕೆಂದು ಕೋರಲಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇನ್ನು ಆನೆ ಮುಖ್ಯರಸ್ತೆಯಲ್ಲಿ ಓಡಾಡುತ್ತಿರುವ ದೃಶ್ಯಗಳನ್ನು ಸ್ಥಳೀಯರು ಚಿತ್ರೀಕರಿಸಿದ್ದು, ಅವುಗಳ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಕಾಡಾನೆಗಳ ಹಾವಳಿಯಿಂದಾಗಿ ಕಾಡಂಚಿನ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಆನೆಗಳನ್ನು ಕೊಲ್ಲಲು ಅನುಮತಿ ನೀಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ…
ರಾಜ್ಯಸಭೆಯ ಕಲಾಪದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುವ ಭರದಲ್ಲಿ ಕೆಲವರು ಅಂಬೇಡ್ಕರ್ ಎನ್ನುವುದನ್ನು ಈಗ ಫ್ಯಾಷನ್…
ದಾ.ರಾ. ಮಹೇಶ್ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…
ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20,21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ…
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…