ಕೊಡಗು

ಜನವಸತಿ ಪ್ರದೇಶದಲ್ಲಿ ಸಂಚರಿಸಿ ಆತಂಕ ಸೃಷ್ಟಿಸಿದ ಕಾಡಾನೆ

ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ.

ಕಾಡಾನೆಯೊಂದು ರಾತ್ರಿ ವೇಳೆ ತೋಟಗಳಿಗೆ ಲಗ್ಗೆಯಿಟ್ಟು ಕೃಷಿ ಫಸಲನ್ನು ನಾಶಗೊಳಿಸುತ್ತಿರುವುದು ಮಾತ್ರವಲ್ಲದೆ ಶುಕ್ರವಾರದಂದು ಬೆಳ್ಳಂಬೆಳಿಗ್ಗೆ ೬ ಗಂಟೆಯ ಸಂದರ್ಭ ರಾಜಾರೋಷವಾಗಿ ಜನ ವಸತಿ ಪ್ರದೇಶಗಳಲ್ಲಿ ಎಗ್ಗಿಲ್ಲದೆ ಸಂಚಾರ ನಡೆಸುತ್ತಿರುವುದು ಆತಂಕ ಸೃಷ್ಟಿಸಿದೆ. ಮೊಟ್ಟಂಡ ಕುಟ್ಟಪ್ಪನವರ ತೋಟದಿಂದ ಮುಖ್ಯರಸ್ತೆಗೆ ಬಂದ ಆನೆ ಗ್ರಾಮ ಪಂಚಾಯಿತಿ ಮತ್ತು ಸ್ಕೂಲ್‌ಬಾಣೆ ನಡುವಿನ ಕಂಬಿಬಾಣೆ ರಸ್ತೆಯಲ್ಲಿ ಸಂಚರಿಸಿ ಪಂಚಾಯಿತಿ ನೌಕರ ಧನಂಜಯ ಎಂಬವರ ಮನೆ ಸಮೀಪದ ತೋಟದೊಳಗೆ ಸಾಗಿ ಹೋಗಿದೆ.

ಮುಖ್ಯ ರಸ್ತೆ ಬದಿಯಲ್ಲಿ ವಾಹನಗಳು ನಿಂತಿದ್ದು, ಅದೃಷ್ಟವಶಾತ್ ಜನತೆಯ ಓಡಾಟ ವಿರಳವಾಗಿತ್ತು. ಈ ಕಾಡಾನೆಯು ಹೊರಗೆ ಬರುತ್ತಿದ್ದಂತೆ ಘೀಳು ಇಟ್ಟ ಹಿನ್ನಲೆಯಲ್ಲಿ ಸುತ್ತ ಮುತ್ತಲಿನ ನಿವಾಸಿಗಳು ಹೊರಬಾರದೆ ಜೀವ ಭಯದಿಂದ ಮನೆಯಲ್ಲಿಯೇ ಉಳಿದುಕೊಂಡಿದ್ದಾರೆ.

ಇಲ್ಲಿಯ ತನಕ ಕಾಡಾನೆಗಳು ಕೃಷಿ ಫಸಲಿನ ತೋಟ ಹಾಗೂ ಗದ್ದೆಗಳಲ್ಲಿ ಕಾಣಿಸಿಕೊಂಡು ಕೃಷಿಫಸಲನ್ನು ತಿಂದು ಕೆಲವೊಮ್ಮೆ ಕಾಡಿಗೆ ಹಿಂತಿರುಗದೆ ತೋಟಗಳಲ್ಲಿಯೇ ಬಿಡುಬಿಡುತ್ತಿದ್ದವು. ಅಲ್ಲದೆ ಕಾಡಾನೆಗಳು ತೋಟದ ಭದ್ರತೆಗೆ ಅಳವಡಿಸಿದ ಬೇಲಿಗಳನ್ನು ನಾಶಗೊಳಿಸುತ್ತಿರುವುದು ಸರ್ವೆ ಸಾಮಾನ್ಯವಾಗಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಕಾಡಾನೆಗಳು ಮುಖ್ಯ ರಸ್ತೆ, ಜನವಸತಿ ಪ್ರದೇಶಗಳಲ್ಲಿ ಸಂಚಾರ ನಡೆಸುವುದು ಆರಂಭಿಸಿರುವುದ್ದರಿಂದ ಗ್ರಾಮಸ್ಥರು ಆತಂಕ ಪಡುವಂತಾಗಿದೆ ಅರಣ್ಯ ಇಲಾಖೆ ಕಾಡಾನೆಗಳ ನಿಯಂತ್ರಣ ಮತ್ತು ಮುಂದಾಗಲಿರುವ ಭಾರೀ ಅನಾಹುತಗಳು ಘಟಿಸುವ ಮುನ್ನ ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ಗೆ ಇಸ್ರೇಲ್‌ನ ಶೌರ್ಯ ಪ್ರಶಸ್ತಿ!

ಜೆರುಸೇಲಂ: ಭೀಕರ ವಿಮಾನ ಅವಘಡವನ್ನು ತಪ್ಪಿಸಿ 174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ…

8 mins ago

ರಾಜ್ಯ ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್‌ಗೆ ಸಂಚು?: ಶಾಸಕ ಗಣಿಗ ರವಿ ಗಂಭೀರ ಆರೋಪ!

ಮಂಡ್ಯ: ರಾಜ್ಯದ ಸಚಿವರಿಗೆ ಮುಜುಗರ ಉಂಟುಮಾಡಲು ಕೇಂದ್ರ ಸಚಿವರೊಬ್ಬರು ಹಾಗೂ ಕರ್ನಾಟಕದ ಬಿಜೆಪಿ ನಾಯಕರೊಬ್ಬರು ಸ್ಟಿಂಗ್ ಆಪರೇಷನ್‌ಗೆ ಸಂಚು ರೂಪಿಸಿದ್ದಾರೆ…

12 mins ago

ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯಲ್ಲಿ ಹುಲಿ ಪ್ರತ್ಯಕ್ಷ

ಸಿದ್ದಾಪುರ: ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯ ಘಟ್ಟತಳ ಹೇರೂರು ಎಸ್ಟೇಟ್ ಬಳಿ ಗುರುವಾರ ರಾತ್ರಿ ಹುಲಿ ಕಾಣಿಸಿಕೊಂಡಿದ್ದು ಬಳಿಕ ಸಮೀಪದ…

28 mins ago

ಓದುಗರ ಪತ್ರ: ಬಂತು ಎಟಿಎಂನಲ್ಲಿ ‘ತೇಪೆ’ ಹಾಕಿದ ನೋಟು!

ಒಂದು ಕಾಲದಲ್ಲಿ (ಒಂದಾನೊಂದು ಕಾಲದಲ್ಲಿ ಎಂಬ ಮಾತಿನಂತೆ) ಎಟಿಎಂ ಯಂತ್ರಗಳಿಂದ ಹಣ ಡ್ರಾ ಮಾಡಿದಾಗ ಸಾಮಾನ್ಯವಾಗಿ ಹೊಸ ಗರಿಗರಿನೋಟುಗಳು ಬರುತ್ತಿದ್ದವು.…

2 hours ago

ಓದುಗರ ಪತ್ರ: ಫ್ಲೆಕ್ಸ್ ಮುಕ್ತವೆಂಬುದು ಸಾಂಪ್ರದಾಯಿಕ ಮಾತಾಗಬಾರದಲ್ಲವೇ?

ಮೈಸೂರು ನಗರವನ್ನು ಫ್ಲೆಕ್ಸ್ ಮುಕ್ತವಾಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳೇ ಆಸಕ್ತಿ ವಹಿಸಿರುವುದು ಸ್ವಾಗತಾರ್ಹವಾಗಿದೆ. ದಸರಾ ಸಮಯದಲ್ಲಿ ಮೈಸೂರಿನಲ್ಲಿ ತಮ್ಮದೂ ಸೇರಿದಂತೆ ಯಾರ ಫ್ಲೆಕ್ಸ್ ಅಥವಾ…

2 hours ago

ಓದುಗರ ಪತ್ರ: ಅರಳುವ ಪ್ರತಿಭೆಗಳಿಗೆ ಸಮಯ ಹೆಚ್ಚು ಸಿಗಲಿ

ಖ್ಯಾತನಾಮರಿಗೆ ವೇದಿಕೆಯ ಕಾರ್ಯಕ್ರಮದಲ್ಲಿ ಸ್ವಲ್ಪ ಕಡಿಮೆ ಸಮಯ ದೊರೆತರೂ ಪರವಾಗಿಲ್ಲ. ಅರಳುವ ಪ್ರತಿಭೆಗಳಿಗೆ ಸಾಕಷ್ಟು ಸಮಯ ಸಿಗಬೇಕೆಂಬ ಆಶಯ ಇರಬೇಕೆಂದು…

6 hours ago