ಕೊಡಗು

ಸಿದ್ದಾಪುರ | ಉಪಟಳ ನೀಡುತ್ತಿದ್ದ ಒಂಟಿ ಸಲಗ ಸೆರೆ

ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ

ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ ಗ್ರಾಮ ವ್ಯಾಪ್ತಿಯ ಕಾಫಿ ತೋಟಗಳಲ್ಲಿ ಬಿಡು ಬಿಟ್ಟು ಅಪಾರ ಪ್ರಮಾಣದ ಕೃಷಿ ಪಸಲು ನಾಶ ಮಾಡುವುದರ ಮೂಲಕ ಕಾರ್ಮಿಕರು, ಬೆಳೆಗಾರರು, ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿ ಮಾಡುತ್ತಿದ್ದ ಪುಂಡನೆಯನ್ನು ಕೊನೆಗೂ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ

ದುಬಾರೆ ಹಾಗೂ ಮತ್ತಿಗೋಡು ಶಿಬಿರದ ಸಾಕಾನೆಗಳಾದ ಅಭಿಮನ್ಯು ಮಹೇಂದ್ರ, ಕಂಜನ್, ಭೀಮಾ, ಸುಗ್ರೀವ, ಹರ್ಷ ಆನೆಗಳೊಂದಿಗೆ
ಕಾರ್ಯಚರಣೆಗಳಿಂದ ಅರಣ್ಯ ಇಲಾಖೆ ಸಿಬ್ಬಂದಿಗಳು ಸತತ ಐದು ಗಂಟೆ ಕಾಲ ಆನೆ ಇರುವಿಕೆಯ ಪತ್ತೆ ಹಚ್ಚುವ ಕಾರ್ಯದಲ್ಲಿ ನಿರತರಾಗಿ ಕೊನೆಗೆ ಚೆಂಬೆಬೆಳ್ಳೂರು ಕಾಫಿ ತೋಟದೊಂದರ ಸಮೀಪ ಕಂಡು ಬಂದಿದೆ.

ವನ್ಯಜೀವಿ ವೈದ್ಯಾಧಿಕಾರಿ ಡಾ ರಮೇಶ್, ಕುಶಾಲನಗರ ಉಪ ಅರಣ್ಯ ಅಧಿಕಾರಿ ಶಾರ್ಪ್ ಶೂಟರ್  ಕಕನ್ನಂಡ ರಂಜನ್ ಬಂದುಕಿನ ಮೂಲಕ ಅರವಳಿಕೆ ನಿಡುವಲ್ಲಿ ಯಶಸ್ವಿಯಾಗಿದ್ದಾರೆ ನಂತರ ಸಾಕಾನೆಗಳ ಸಹಕಾರದಿಂದ ಆರೈಕೆ ಮಾಡಿ ನಂತರ ಮತ್ತಿಗೂಡು ಶಿಬಿರಕ್ಕೆ ಕಳಿಸಲಾಯಿತು.

ಜಿಲ್ಲಾ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸೋನಾಲ್ ವೃಷ್ಣಿ, ವೀರಾಜಪೇಟೆ ತಾಲೂಕು ಉಪ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ್ ಅವರ ಮಾರ್ಗದರ್ಶನದಲ್ಲಿ ಕಾರ್ಯಚರಣೆ ನಡೆಸಿ ಕಾಡಾನೆ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ವರ್ಷಗಳಿಂದ ನಿರಂತರವಾಗಿ ಗ್ರಾಮ ವ್ಯಾಪ್ತಿಯ ಕಾಫಿ ತೋಟಗಳಲ್ಲಿ ಹಡಗಲಿನಲ್ಲೂ ಕಾಣಿಸಿಕೊಳ್ಳುವುದರ ಮೂಲಕ ಹಲವರ ಮೇಲೆ ದಾಳಿಗೆ ಯತ್ನಿಸಿತ್ತು.

ಬೆಳೆಗಾರರು, ಕಾರ್ಮಿಕರು ತೋಟಕೆ ತೆರಳಲು ಹಿಂದೇಟು ಆಕೂತ್ತಿದ್ದರು. ಚೆಂಬೆಬೆಳ್ಳೂರು, ದೇವಣಗೇರಿ, ಬೆಳ್ಳರಿಮಾಡು, ಕುಕ್ಲೂರು, ಪೊದಕೋಟೆ, ಐಮಂಗಲ, ಮೈತಾಡಿ, ಕದನೂರು, ಬಿಳುಗುಂದ, ಹಾಲುಗುಂದ ಹಾಗೂ ಅಮ್ಮತಿ ಸುತ್ತಮುತ್ತಲ ಗ್ರಾಮಗಳಲ್ಲಿ ಬೀಡು ಬಿಟ್ಟು ದಾಂಧಲೆ ನಡೆಸುತ್ತಿದ್ದು ಕಾಡಾನೆ ಸೆರೆ ಹಿಡಿಯಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದರು.

ಈ ಸಂದರ್ಭ ಮಡಿಕೇರಿ ಡಿ ಸಿ ಎಫ್ ರಮೇಶ್, ಎಸಿಎಫ್ ಗೋಪಾಲ್, ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ, ವೀರಾಜಪೇಟೆ ವಲಯ ಅರಣ್ಯ ಅಧಿಕಾರಿ ಶಿವರಾಮ್, ತಿತಿಮತಿ ವಲಯ ಅರಣ್ಯ ಅಧಿಕಾರಿ ಗಂಗಾಧರ್ ಡಾ ಚೆಟ್ಟಿಯಪ್ಪ, ಡಿ ಆರ್ ಎಫ್ ಓ ಸಂಜಿತ್ ಸೋಮಯ್ಯ, ರಾಘವ, ದಿವಾಕರ್, ಶಶಿ, ಮೂರ್ತಿ, ಜಡಿಮಣಿ ಸೇರಿದಂತೆ ಆರ್ ಆರ್ ಟಿ ,ಇ ಪಿ ಟಿ, ಅರಣ್ಯ ಇಲಾಖೆಯ ಸಿಬ್ಬಂದಿ ಸೇರಿ ನೂರಕ್ಕೂ ಅಧಿಕ ಮಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಚ್‌.ಡಿ.ಕೋಟೆ: ಗುಜರಿ ಗೋಡೌನ್‌ಗೆ ಬೆಂಕಿ: ಲಕ್ಷಾಂತರ ರೂ ಬೆಲೆಬಾಳುವ ಸಾಮಗ್ರಿ ನಾಶ

ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…

2 hours ago

ವಂದೇ ಭಾರತ್‌ ರೈಲಿನಲ್ಲಿ ಕೊಟ್ಟ ಮೊಸರಿನಲ್ಲಿ ಹುಳು ಪತ್ತೆ: IRCTCಗೆ 10 ಲಕ್ಷ ರೂ ದಂಡ

ಪಾಟ್ನಾ: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…

2 hours ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು: 80 ಎಕರೆಗೂ ಹೆಚ್ಚು ಅರಣ್ಯ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…

2 hours ago

ಪಾಲಿಕೆ ಬಜೆಟ್‌ ಸತ್ವ ಇಲ್ಲದ ಬಜೆಟ್‌: ಮಾಜಿ ಮೇಯರ್‌ ಶಿವಕುಮಾರ್‌ ಆಕ್ರೋಶ

ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…

2 hours ago

ಗುಂಡ್ಲುಪೇಟೆ| ಮದ್ದೂರು ವಲಯದಲ್ಲಿ ಮತ್ತೆರಡು ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…

3 hours ago

ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿದ ಸರ್ಕಾರ: ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…

3 hours ago