ವಿರಾಜಪೇಟೆ: ಹಿಂಡಿನಿಂದ ಬೇರ್ಪಟ್ಟ ಕಾಡಾನೆಯೊಂದು ಗುರುವಾರ ಬೆಳಿಗ್ಗೆ ರಸ್ತೆಯಲ್ಲಿ ಸಂಚರಿಸಿ ಭಯದ ವಾತಾವರಣ ಸೃಷ್ಟಿ ಮಾಡಿರುವ ಘಟನೆ ಒಂದನೇ ರುದ್ರಗುಪ್ಪೆ ಗ್ರಾಮದಲ್ಲಿ ನಡೆದಿದೆ. ಶ್ವಾನ ಬೊಗಳಿದ್ದರಿಂದ ಗಜರಾಜ ಸ್ಥಳದಿಂದ ಕಾಲ್ಕಿತ್ತಿದ್ದು, ಭಯದ ವಾತಾವರಣ ಸೃಷ್ಟಿಯಾಗಿದೆ.
ತಾಲ್ಲೂಕಿನ ಬಿಟ್ಟಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಒಂದನೇ ರುದ್ರಗುಪ್ಪೆ ಗ್ರಾಮದ ಆಟ್ರಂಗಡ ಮನೆಗೆ ತೆರಳುವ ಸಂಪರ್ಕ ರಸ್ತೆಯಲ್ಲಿ ಗುರುವಾರ ಬೆಳಿಗ್ಗೆ ಕಾಡಾನೆಯೊಂದು ರಾಜಾರೋಷವಾಗಿ ಸಂಚರಿಸಿ ಗ್ರಾಮಸ್ಥರಲ್ಲಿ ಭಯದ ವಾತಾವರಣ ಸೃಷ್ಟಿ ಮಾಡಿದೆ. ಇದೇ ವೇಳೆ ಗ್ರಾಮದ ನಿವಾಸಿಯೊಬ್ಬರು ಬೈಕ್‌ನಲ್ಲಿ ಸಂಚರಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗ್ರಾಮದ ವಿವಿಧ ಕಾಫಿ ತೋಟಗಳಲ್ಲಿ ಬೀಡುಬಿಟ್ಟಿರುವ ಕಾಡಾನೆಗಳ ಹಿಂಡು, ಕಾಫಿ ಗಿಡಗಳು, ಇತರೆ -ಸಲನ್ನು ತುಳಿದು ಹಾನಿ ಮಾಡಿದೆ. ಕೂಡಲೇ ಅರಣ್ಯ ಇಲಾಖೆ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.





