ಮಡಿಕೇರಿ: ಮಗು, ಪತಿಯನ್ನು ತ್ಯಜಿಸಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕೊಟ್ಟೋಳಿ ಗ್ರಾಮದಲ್ಲಿ ನಡೆದಿದೆ.
ವಿರಾಜಪೇಟೆ ನಿವಾಸಿ ದಿವಂಗತ ಕಟ್ಟಿ ಬಿದ್ದಪ್ಪ-ಶಶೀಲಾ ದಂಪತಿ ಪುತ್ರಿ ಕಾವೇರಮ್ಮ (24) ನೇಣಿಗೆ ಶರಣಾಗಿರುವ ಮಹಿಳೆ. ಕುಟ್ಟೋಳಿ ನಿವಾಸಿ ದಿನೇಶ್ ಅವರ ಜೊತೆ 4 ವರ್ಷದ ಹಿಂದೆ ಹಸೆಮಣೆ ಏರಿದ್ದರು. ದಂಪತಿಗೆ 14 ದಿನದ ಮಗು ಇತ್ತು.
ನಿನ್ನೆ ದಿನೇಶ್ ತಮ್ಮ ಮನೆಯ ಸಮೀಪದ ಕಾಫಿ ತೋಟಕ್ಕೆ ಕೆಲಸಕ್ಕೆಂದು ಹೋದ ವೇಳೆ, ಕಾವೇರಮ್ಮ ಸ್ನಾನದ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಮಗುವಿನ ಕೂಗಾಟ ಕೇಳಿದ ತಕ್ಷಣ ಬಂದು ನೋಡಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತಳ ಅಣ್ಣ ಎಂ.ಎ. ತಿಮ್ಮಯ್ಯ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ವಿರಾಜಪೇಟೆಯ ಗ್ರಾಮಾಂತರ ಠಾಣೆಯ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಬೆಂಗಳೂರು: ಇರಾನ್-ಇಸ್ರೇಲ್ ನಡುವಿನ ಸಂಘರ್ಷ ಏರ್ಪಟ್ಟಿರುವ ಪರಿಣಾಮ ಕನ್ನಡಿಗರ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ…
ನಾಪೋಕ್ಲು: ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಾಗ್ದಾಳಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಳಸಿಕೆರೆ ಗ್ರಾಮದ…
ಬೆಂಗಳೂರು: ಈ ಬಾರಿಯ ಬಜೆಟ್ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು…
ಕೊಡಗು: ನಾಳೆ ವರ್ಷದ ಮೊದಲ ಚಂದ್ರಗ್ರಹಣ ಹೋಳಿ ಹುಣ್ಣಿಮೆಯ ದಿನದಂದು ಸಂಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ಪೂಜಾ…
ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನು ಸ್ಥಳೀಯರ ಆಶಯಗಳಿಗೆ ವಿರುದ್ಧವಾಗಿ ಮದ್ದೂರು…