Mysore
21
overcast clouds

Social Media

ಮಂಗಳವಾರ, 21 ಜುಲೈ 2026
Light
Dark

ಮನೆಯ ಗೋಡೆ ಕುಸಿದು ಕಾರ್ಮಿಕ‌ ಮಹಿಳೆ ದುರ್ಮರಣ

kodagu dies

ಸೋಮವಾರಪೇಟೆ: ಮನೆಯ ಗೋಡೆ ಕುಸಿದು ಕಾರ್ಮಿಕ‌ ಮಹಿಳೆ ಸಾವನ್ನಪ್ಪಿರುವ ಘಟನೆ ಸೋಮವಾರಪೇಟೆ ತಾಲ್ಲೂಕಿನ ಹಾನಗಲ್ಲು ಗ್ರಾಮದಲ್ಲಿ ನಡೆದಿದೆ.

ಕಲಬುರಗಿ ಜಿಲ್ಲೆ, ಅಫ್ಜಲ್ ಪುರದ ಸುಷ್ಮಾ(29) ಎಂಬುವವರೇ ಮೃತ ಮಹಿಳೆಯಾಗಿದ್ದಾರೆ. ಇಂದು ಬೆಳಿಗ್ಗೆ 5.30ರ ಸಮಯದಲ್ಲಿ ಈ ಘಟನೆ ನಡೆದಿದ್ದು, ಮನೆಯೊಳಗಿದ್ದ ಮಕ್ಕಳು ಹಾಗೂ ಸಹೋದರ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಳೆದ ಎರಡು ವರ್ಷದ ಹಿಂದೆ ಸೋಮವಾರಪೇಟೆಗೆ ಆಗಮಿಸಿದ್ದ ಕುಟುಂಬ ಇಲ್ಲೇ ಕೂಲಿ ಕೆಲಸ ಮಾಡಿಕೊಂಡು ವಾಸವಿದ್ದರು.

ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮನೆಯ ಮಣ್ಣಿನ ಗೋಡೆ ಕುಸಿದು ತಲೆ ಭಾಗಕ್ಕೆ ತೀವ್ರ ಪೆಟ್ಟು ಬಿದ್ದ ಹಿನ್ನೆಲೆ ಸ್ಥಳದಲ್ಲೇ ಸುಷ್ಮಾ ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸ್ ಇಲಾಖೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Tags:
error: Content is protected !!