ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದ ಘಟನೆ ನಡೆದಿದೆ.
ದಾಳಿಯಲ್ಲಿ ಕಾರ್ಮಿಕ ಮಹಿಳೆ ಸುನೀತಾ ಗಂಭೀರವಾಗಿ ಗಾಯಗೊಂಡು ಮಾಲ್ದಾರೆ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಬಳಿಕ ಸಿದ್ದಾಪುರ ಆಸ್ಪತ್ರೆಗೆ ದಾಖಲಿಲಿಸಲಾಗಿದೆ.
ಶುಕ್ರವಾರ ಮಧ್ಯಾಹ್ನದ ವೇಳೆ ಕಾಫಿ ತೋಟದಿಂದ ಏಕಾಏಕಿ ಹೊರಬಂದ ಕಾಡಾನೆ ಕಾರ್ಮಿಕರತ್ತ ದಾಳಿ ನಡೆಸಲು ಯತ್ನಿಸಿದಾಗ ಇತರ ಕಾರ್ಮಿಕರು ಪ್ರಾಣಪಾಯದಿಂದ ಓಡಿ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ತಕ್ಷಣ ಆಗಮಿಸಿದ ಆರ್‌ಆರ್‌ಟಿ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಆನೆಯನ್ನು ಕಾಡಿಗಟ್ಟಲು ಮುಂದಾದರು.
ಈ ನಡುವೆ ಕಲ್ಲಳ್ಳ-ತಟ್ಟಳ್ಳಿ ಮಾರ್ಗದ ರಸ್ತೆಯಲ್ಲಿ ನಿಲ್ಲಿಸಿದ್ದ ಪ್ರವೀಣ ಅವರಿಗೆ ಸೇರಿದ ಜೀಪಿನ ಮೇಲೆ ಕಾಡಾನೆ ದಾಳಿ ನಡೆಸಿ ವಾಹನವನ್ನು ಜಖಂಗೊಳಿಸಿದೆ. ಆನೆಯನ್ನು ಅಟ್ಟಲು ತೆರಳಿದ ಅರಣ್ಯ ಇಲಾಖೆ ಸಿಬ್ಬಂದಿಗಳ ಮೇಲೂ ದಾಳಿ ಮಾಡಲು ಯತ್ನಿಸಿದಾಗ ಇಬ್ಬರು ಸಿಬ್ಬಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ನಂತರ ಆನೆಯನ್ನು ಕಾಡಿಗಟ್ಟುವಲ್ಲಿ ಸಿಬ್ಬಂದಿ ಯಶಸ್ವಿಯಾದರು.
ಕೆಲವು ದಿನಗಳಿಂದ ಈ ಭಾಗದಲ್ಲಿ ಕಾಡಾನೆ ನಿರಂತರವಾಗಿ ಕಾಣಿಸಿಕೊಳ್ಳುತ್ತಿದ್ದು, ಕಾರ್ಮಿಕರಲ್ಲಿ ಆತಂಕ ಹೆಚ್ಚಾಗಿದೆ. ಕಾಡಾನೆಯನ್ನು ಸೆರೆಹಿಡಿದು ಸ್ಥಳಾಂತರಿಸಬೇಕೆಂದು ಕಾರ್ಮಿಕ ಸಂಘಟನೆಯ ಮುಖಂಡ ಮಣಿ ಒತ್ತಾಯಿಸಿದರು.
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…
ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…