ಕೊಡಗು

ಕೊಡಗಿನಲ್ಲಿ ಗುಡ್ಡ ಕುಸಿತ ಸ್ಥಳಗಳಿಗೆ ಶಾಶ್ವತ ತಡೆಗೋಡೆ ಕಾಮಗಾರಿ ಶುರು

ಮಡಿಕೇರಿ: 2018ರ ದುರಂತದ ಬಳಿಕ ಕೊಡಗು ಜಿಲ್ಲೆಯಲ್ಲಿ ಪ್ರತಿವರ್ಷ ಮಳೆಗಾಲ ಆರಂಭವಾದರೆ ಸಾಕು ಜಿಲ್ಲೆಯ ಜನ ಬೆಚ್ಚಿ ಬೀಳುತ್ತಾರೆ.

ಭಾರೀ ಮಳೆಯಿಂದ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಗುಡ್ಡ ಕುಸಿತವಾಗಿ ರಸ್ತೆ ಸಂಚಾರಕ್ಕೂ ಅಡಚಣೆ ಉಂಟಾಗುತ್ತದೆ. ಇದಕ್ಕೆ ಪರಿಹಾರ ಕಲ್ಪಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಗುಡ್ಡ ಕುಸಿಯುವ ಸ್ಥಳಗಳನ್ನು ಗುರುತಿಸಿ ಶಾಶ್ವತ ತಡೆಗೋಡೆ ನಿರ್ಮಾಣ ಮಾಡಲು ಮುಂದಾಗಿದೆ.

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ 18 ಕಡೆಗಳಲ್ಲಿ ತಡೆಗೋಡೆ ನಿರ್ಮಿಸಲು ಸುಮಾರು 94.80 ಕೋಟಿ ರೂ ಅನುದಾನ ಬಿಡುಗಡೆ ಮಾಡಿದೆ.

ಈ ಹಿನ್ನೆಲೆಯಲ್ಲಿ ಮಡಿಕೇರಿ ತಾಲ್ಲೂಕಿನ ಮದೆನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿ ಕರ್ತೋಜಿ ಗ್ರಾಮದಲ್ಲಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ತಡೆಗೋಡೆ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ.

ಇದರಿಂದ ಹರ್ಷಗೊಂಡ ಸ್ಥಳೀಯರು ಕೇಂದ್ರ ಸರ್ಕಾರ ಹಾಗೂ ಯದುವೀರ್‌ ಅವರ ಕಾರ್ಯವನ್ನು ಶ್ಲಾಘಿಸಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಶಾಸಕರ ಡಿನ್ನರ್‌ ಮೀಟಿಂಗ್‌: ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿದ್ದಿಷ್ಟು.!

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಬಣದ ಕೆಲ ಶಾಸಕರು ಖಾಸಗಿ ಹೋಟೆಲ್‌ನಲ್ಲಿ ಡಿನ್ನರ್‌ ಮೀಟಿಂಗ್‌ ನಡೆಸಿದ್ದಾರೆ ಎಂಬ ಸುದ್ದಿ ಹಿನ್ನೆಲೆಯಲ್ಲಿ ಈ…

14 mins ago

ಮಾರ್ಚ್.‌3ರಂದು ರಕ್ತಚಂದ್ರಗ್ರಹಣ: ರಾಜ್ಯದಲ್ಲಿ 25 ನಿಮಿಷ ಗ್ರಹಣ ಗೋಚರ

ಬೆಂಗಳೂರು: ಮಾರ್ಚ್.‌3ರಂದು ಕೇತುಗ್ರಸ್ತ ಚಂದ್ರಗ್ರಹಣ ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ ಮಾಸದ ಹುಣ್ಣಿಮೆಯ…

40 mins ago

ಮಡಿಕೇರಿ| ಯುವಕರ ಮೇಲೆ ಹಲ್ಲೆ ಪ್ರಕರಣ: ಎಲ್ಲಾ ಆರೋಪಿಗಳ ಬಂಧನ

ಮಡಿಕೇರಿ: ಕೊಡಗು ಜಿಲ್ಲೆಯ ನಾಪೋಕ್ಲುವಿನಲ್ಲಿ ನಡೆಯಲಿರುವ ಹಿಂದೂ ಸಂಗಮ ಕಾರ್ಯಕ್ರಮದ ಕುರಿತು ನಿನ್ನೆ ವಾಹನದಲ್ಲಿ ಪ್ರಚಾರ ಮಾಡುತ್ತಿದ್ದ ಗೌತಮ್‌ ಎಂಬಾತನ…

50 mins ago

ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ: ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ ಜಾರಿ

ಮೈಸೂರು: ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಮಾರ್ಚ್.‌17ರವರೆಗೂ ನಡೆಯಲಿದೆ. ಮೈಸೂರು ಜಿಲ್ಲೆಯಲ್ಲಿ 35,835 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು,…

2 hours ago

ಮಾ.23ರಿಂದ ವಿಜೃಂಭಣೆಯ ವೈರಮುಡಿ ಬ್ರಹ್ಮೋತ್ಸವ

ಮೇಲುಕೋಟೆ: ಮಾ.೨೩ರಿಂದ ಏ.೩ರವರೆಗೆ ನಡೆಯುವ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿಯ ಪ್ರಖ್ಯಾತ ವೈರಮುಡಿ ಬ್ರಹ್ಮೋತ್ಸವವನ್ನು ವಿಜೃಂಭಣೆಯಿಂದ ನೆರವೇರಿಸಲು ಸಿದ್ಧತೆ ಮಾಡಲಾಗುತ್ತಿದೆ ಎಂದು…

5 hours ago

ಓದುಗರ ಪತ್ರ: ಮೊಬೈಲ್ ಸ್ಟೇಟಸ್ !

ಮೊಬೈಲ್ ಸ್ಟೇಟಸ್ ! ಶಾಲೆಗಳಲ್ಲಿ ಮೊಬೈಲ್ ನಿಷೇಧ..? ಸರ್ಕಾರದ ಮೆಸೇಜ್‌ಗೆ ಲೈಕ್ ನೀಡಬಹುದು ಪೋಷಕರು ! ಆದರೆ, ಸ್ಟೂಡೆಂಟ್‌ಗಳು ?…

5 hours ago