ಮಡಿಕೇರಿ: 2018ರ ದುರಂತದ ಬಳಿಕ ಕೊಡಗು ಜಿಲ್ಲೆಯಲ್ಲಿ ಪ್ರತಿವರ್ಷ ಮಳೆಗಾಲ ಆರಂಭವಾದರೆ ಸಾಕು ಜಿಲ್ಲೆಯ ಜನ ಬೆಚ್ಚಿ ಬೀಳುತ್ತಾರೆ.
ಭಾರೀ ಮಳೆಯಿಂದ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಗುಡ್ಡ ಕುಸಿತವಾಗಿ ರಸ್ತೆ ಸಂಚಾರಕ್ಕೂ ಅಡಚಣೆ ಉಂಟಾಗುತ್ತದೆ. ಇದಕ್ಕೆ ಪರಿಹಾರ ಕಲ್ಪಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಗುಡ್ಡ ಕುಸಿಯುವ ಸ್ಥಳಗಳನ್ನು ಗುರುತಿಸಿ ಶಾಶ್ವತ ತಡೆಗೋಡೆ ನಿರ್ಮಾಣ ಮಾಡಲು ಮುಂದಾಗಿದೆ.
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ 18 ಕಡೆಗಳಲ್ಲಿ ತಡೆಗೋಡೆ ನಿರ್ಮಿಸಲು ಸುಮಾರು 94.80 ಕೋಟಿ ರೂ ಅನುದಾನ ಬಿಡುಗಡೆ ಮಾಡಿದೆ.
ಈ ಹಿನ್ನೆಲೆಯಲ್ಲಿ ಮಡಿಕೇರಿ ತಾಲ್ಲೂಕಿನ ಮದೆನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿ ಕರ್ತೋಜಿ ಗ್ರಾಮದಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ತಡೆಗೋಡೆ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ.
ಇದರಿಂದ ಹರ್ಷಗೊಂಡ ಸ್ಥಳೀಯರು ಕೇಂದ್ರ ಸರ್ಕಾರ ಹಾಗೂ ಯದುವೀರ್ ಅವರ ಕಾರ್ಯವನ್ನು ಶ್ಲಾಘಿಸಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…