Mysore
19
broken clouds

Social Media

ಶನಿವಾರ, 21 ಫೆಬ್ರವರಿ 2026
Light
Dark

ಪ್ರಚಾರ ನಿಲ್ಲಿಸಿ ಪ್ರತಿಭಟನೆಯಲ್ಲಿ ಭಾಗಿಯಾದ ಯದುವೀರ್‌ !

ಕೊಡಗು :  ಕೊಡಗಿನಲ್ಲಿ ತಮ್ಮ ಮತ ಪ್ರಚಾರವನ್ನು ಮೊಟಕುಗೊಳಿಸಿ ಸಿದ್ದಾಪುರದಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರು ನಡೆಸಿದ ಪ್ರತಿಭಟನೆಯಲ್ಲಿ ಯದುವೀರ್ ಪಾಲ್ಗೊಂಡರು.

ಕೊಡಗು ಜಿಲ್ಲೆಯ ವಾಲ್ನೂರು ಗ್ರಾಮದಲ್ಲಿ ಗುರುವಾರ ತಡರಾತ್ರಿ ಚುನಾವಣಾ ಪ್ರಚಾರದ ವೇಳೆ ಕಾರ್ ಡಿಕ್ಕಿಯಾಗಿ ಪಕ್ಷದ ಕಾರ್ಯಕರ್ತನೊಬ್ಬ ಮೃತಪಟ್ಟಿರುವ ಬಗ್ಗೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು, ಸಿದ್ದಾಪುರ ಗ್ರಾಮದಲ್ಲಿ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿಗೊಳಿಸಿತ್ತು

ಮೈಸೂರು-ಕೊಡಗು ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ತಮ್ಮ ಮತಪ್ರಚಾರಕ್ಕೆ ಬ್ರೇಕ್ ಹಾಕಿ ಬಿಜೆಪಿ ಕಾರ್ಯಕರ್ತರು ಸಿದ್ದಾಪುರದಲ್ಲಿ ನಡೆಸಿದ ಪ್ರತಿಭಟನೆಯಲ್ಲಿ ಪಾಲ್ಗೊಂಡರು.

ಸಿದ್ದಾಪುರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಜಮಾಯಿಸಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು,

ಮೈಸೂರು-ಕೊಡಗು ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮೃತ ರಾಮಪ್ಪ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ನೂರಾರು ಬಿಜೆಪಿ ಪಕ್ಷದ ಕಾರ್ಯಕರ್ತರು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದರಿಂದ ವಾಹನಗಳ ಸಂಚಾರಕ್ಕೆ ಅಡ್ಡಿ ಉಂಟಾಯಿತು.

ಘಟನಾ ಸ್ಥಳಕ್ಕೆ ಶಾಸಕರಾದ ಎ ಎಸ್ ಪೊನ್ನಣ್ಣ, ಡಾ ಮಂತರ್ ಗೌಡ ಭೇಟಿ ನೀಡಿ ಪ್ರತಿಭಟನಾಕಾರರ ಮನವೊಲಿಸಲು ಯತ್ನಿಸಿದರು.

ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡಬೇಕು ಹಾಗೂ ಅಪಘಾತಕ್ಕೆ ಕಾರಣರಾದ ವಾಹನದಲ್ಲಿದ್ದ ಎಲ್ಲರನ್ನೂ ಬಂಧಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

Tags:
error: Content is protected !!