ಕೊಡಗು/ವಿರಾಜಪೇಟೆ: ನಗರ ಬಿಜೆಪಿ ವತಿಯಿಂದ ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪರವಾಗಿ ರೋಡ್ ಶೋ ಮೂಲಕ ಮತಯಾಚನೆ ನಡೆಸಲಾಯಿತು.
ಬೆಳಿಗ್ಗೆ ಪಟ್ಟಣದ ತೆಲುಗರ ಬೀದಿಯ ಮಾರಿಯಮ್ಮ ಗುಡಿಯಿಂದ ವಿರಾಜಪೇಟೆಯ ಗಡಿಯಾರ ಕಂಬದ ಮೂಲಕ ಖಾಸಗಿ ಬಸ್ ನಿಲ್ದಾಣಕ್ಕಾಗಿ ಗೋಣಿಕೊಪ್ಪ ಮುಖ್ಯ ರಸ್ತೆಗಳಲ್ಲಿ ರೋಡ್ ಶೋ ಮತ್ತು ಮತಯಾಚನೆ ನಡೆಸಲಾಯಿತು. ಈ ಸಂದರ್ಭ ಮಹಿಳಾ ತಂಡದಿಂದ ಚಂಡೆ ವಾದ್ಯ ಗಮನಸೆಳೆಯಿತು.
ರೋಡ್ ಶೋನಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್, ಚಲನಚಿತ್ರ ನಟಿ ಹಾಗೂ ವಿಧಾನಪರಿಷತ್ ಸದಸ್ಯೆ ತಾರಾ, ಕೊಡಗು ಮೈಸೂರು ಕ್ಷೇತ್ರದ ಚುನಾವಣಾ ಉಸ್ತುವಾರಿ ಪಳೆಯಂಡ ರಾಬೀನ್ ದೇವಯ್ಯ, ವಿಧಾನ ಪರಿಷತ್ ಸದಸ್ಯ ಸುಜಾಕುಶಾಲಪ್ಪ, ಮಾಜಿ ಶಾಸಕ ಕೆ.ಜಿ. ಬೋಪಯ್ಯ ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿಕಾಳಪ್ಪ ಇತರರು ಉಪಸ್ಥಿತರಿದ್ದರು.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…