Mysore
29
few clouds

Social Media

ಮಂಗಳವಾರ, 11 ಮಾರ್ಚ್ 2025
Light
Dark

ಕೊಡಗು ಜಿಲ್ಲೆಯಾದ್ಯಂತ ಯೆಲ್ಲೋ ಅಲರ್ಟ್ ಘೋಷಣೆ ; ಶಾಲಾ-ಕಾಲೇಜಿಗೆ ರಜೆ

ಕೊಡಗು : ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದ್ದು, ಜಿಲ್ಲೆಯಾದ್ಯಂತ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಕೆಲವಡೆ ಮಾತ್ರ ಅಲ್ಲ ಜಿಲ್ಲೆಯಾದ್ಯಂತ ಮಳೆ ಧಾರಾಕಾರವಾಗಿ ಸುರಿಯುತ್ತಿದ್ದು, ರಸ್ತೆಗಳೆಲ್ಲವೂ ಕೂಡ ಜಲಾವೃತಗೊಂಡಿದೆ. ಮಳೆಯ ಕಾರಣದಿಂದ ಅಲ್ಲಲ್ಲಿ ಅನಾಹುತಗಳು ಕೂಡ ಸಂಭವಿಸುತ್ತಿದೆ.

ಇನ್ನು ಭಾರೀ ಮಳೆಯಿಂದಾಗಿ ಕೊಡಗು ಜಿಲ್ಲಾಡಳಿತ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ. ಮತ್ತೊಂದು ಕಡೆ ತಲಕಾವೇರಿ ಬಳಿ ಬೃಹತ್‌ ಗಾತ್ರದ ಮರವೊಂದು ನೆಲಕ್ಕುರುಳಿರುವುದರಿಂದ ಭಾಗಮಂಡಲಕ್ಕೆ ಹೋಗುವ ರಸ್ತೆಯಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಸ್ಥಳದಲ್ಲಿ ವಿದ್ಯುತ್‌ ಕಂಬಗಳು ಕೂಡ ಧರೆಗುರುಳಿದೆ. ಕೆಲವು ಕಡೆ ಮನೆಗಳಿಗೆ ಮಳೆ ನೀರು ನುಗ್ಗಿ ಅವಾಂತರ ಸೃಷ್ಠಿ ಮಾಡಿದೆ.

ಮಳೆ ನಿಲ್ಲುವ ಲಕ್ಷಣಗಳು ಕಾಣದೆ ಇರುವುದರಿಂದ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ.

Tags: