ಕೊಡಗು : ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದ್ದು, ಜಿಲ್ಲೆಯಾದ್ಯಂತ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕೆಲವಡೆ ಮಾತ್ರ ಅಲ್ಲ ಜಿಲ್ಲೆಯಾದ್ಯಂತ ಮಳೆ ಧಾರಾಕಾರವಾಗಿ ಸುರಿಯುತ್ತಿದ್ದು, ರಸ್ತೆಗಳೆಲ್ಲವೂ ಕೂಡ ಜಲಾವೃತಗೊಂಡಿದೆ. ಮಳೆಯ ಕಾರಣದಿಂದ ಅಲ್ಲಲ್ಲಿ ಅನಾಹುತಗಳು ಕೂಡ ಸಂಭವಿಸುತ್ತಿದೆ.
ಇನ್ನು ಭಾರೀ ಮಳೆಯಿಂದಾಗಿ ಕೊಡಗು ಜಿಲ್ಲಾಡಳಿತ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ. ಮತ್ತೊಂದು ಕಡೆ ತಲಕಾವೇರಿ ಬಳಿ ಬೃಹತ್ ಗಾತ್ರದ ಮರವೊಂದು ನೆಲಕ್ಕುರುಳಿರುವುದರಿಂದ ಭಾಗಮಂಡಲಕ್ಕೆ ಹೋಗುವ ರಸ್ತೆಯಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಸ್ಥಳದಲ್ಲಿ ವಿದ್ಯುತ್ ಕಂಬಗಳು ಕೂಡ ಧರೆಗುರುಳಿದೆ. ಕೆಲವು ಕಡೆ ಮನೆಗಳಿಗೆ ಮಳೆ ನೀರು ನುಗ್ಗಿ ಅವಾಂತರ ಸೃಷ್ಠಿ ಮಾಡಿದೆ.
ಮಳೆ ನಿಲ್ಲುವ ಲಕ್ಷಣಗಳು ಕಾಣದೆ ಇರುವುದರಿಂದ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ.
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿಗಳ ಉಪಟಳ ಹೆಚ್ಚಾಗಿದ್ದು, ದೇಪಾಪುರ ಗ್ರಾಮದ ಹೊರವಲಯದಲ್ಲಿ ಹುಲಿಯೊಂದು ಬೋನಿಗೆ ಬಿದ್ದಿದೆ. ಹುಲಿಯನ್ನು ನೋಡಲು…
ಬೆಂಗಳೂರು: ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ ದಟ್ಟವಾದ…
ತಿರುವನಂತಪುರಂ: ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣದ ಆರೋಪಿಗಳ ಜೊತೆಗೆ ಸೋನಿಯಾ ಗಾಂಧಿ ನಂಟಿದೆ ಎಂದು ಸಿಎಂ ಪಿಣರಾಯಿ ವಿಜಯನ್…
ಸ್ಯಾಂಡಲ್‌ವುಡ್‌ನಲ್ಲಿ ಇಂದು ಕ್ರಿಸ್‌ಮಸ್ ಹಬ್ಬದ ಸಡಗರದ ನಡುವೆ ಎರಡು ಬಹುನಿರೀಕ್ಷಿತ ಸಿನಿಮಾಗಳು ಅಬ್ಬರದಿಂದ ತೆರೆಗೆ ಬಂದಿವೆ, ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್,…
ಮೈಸೂರು: ಕಾಡಾನೆಗಳು ಊರಿಗೆ ಬರದಂತೆ ಅರಣ್ಯ ಇಲಾಖೆಯು ಎಐ ಆಧಾರಿರ ಕೂಗು ಕ್ಯಾಮರಾವನ್ನು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅಳವಡಿಸಿದೆ.…
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ…