ಕೊಡಗು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಬಳಿ ಕಂದಕಕ್ಕೆ ಉರುಳಿದ ಸೇನಾ ವಾಹನದ ಅಪಘಾತದಲ್ಲಿ ಹುತಾತ್ಮರಾದ ಯೋಧ ದಿವಿನ್ ಅವರ ಹುಟ್ಟೂರಿನಲ್ಲಿ ಅಂತ್ಯ ಸಂಸ್ಕಾರ ನೆರವೇರಿದೆ.
ಮೃತ ಯೋಧ ದಿವಿನ್ ಅವರ ಅಂತ್ಯ ಸಂಸ್ಕಾರವನ್ನು ಇಂದು(ಜನವರಿ.1) ಕೊಡುಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಮಾಲಂಬಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ್ದು, ದಿವಿನ್ ಅವರ ಪಾರ್ಥಿವ ಶರೀರಕ್ಕೆ ಚಿಕ್ಕಪ್ಪನ ಮಗ ಅಗ್ನಿಸ್ಪರ್ಶ ಮಾಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಸಮೀಪದಲ್ಲಿ ಸೇನಾ ವಾಹನ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿತ್ತು. ಈ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮೃತ ಯೋಧ ದಿವಿನ್ ಅವರನ್ನು ಉಧಂಪುರ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಾಕಾರಿಯಾಗದೇ ನಿಧನರಾಗಿದ್ದರು. ಅವರ ಪಾರ್ಥಿವ ಶರೀರವನ್ನು ನಿನ್ನೆ(ಡಿ.31) ತರಲಾಗಿತ್ತು. ಇಂದು ಬೆಳಿಗ್ಗೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ನೀಡಿದ ಬಳಿಕ ಅಂತ್ಯ ಸಂಸ್ಕಾರವನ್ನು ನೆರವೇರಿಸಲಾಗಿದೆ.