ಕೊಡಗು: ಪ್ರಭಾರ ಯೋಜನಾಧಿಕಾರಿಯೊಬ್ಬರು ಕಾರಿನಲ್ಲಿಯೇ ಕುಳಿತ ಸ್ಥಿತಿಯಲ್ಲಿಯೇ ಸಾವನ್ನಪ್ಪಿರುವ ಘಟನೆ ಪಿರಿಯಾಪಟ್ಟಣದಲ್ಲಿ ನಡೆದಿದೆ.
ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಪ್ರಭಾರ ಯೋಜನಾಧಿಕಾರಿ ಮನಮೋಹನ್ ರಾಯ್ ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ.
ತಿತಿಮತಿ ಗ್ರಾಮದಲ್ಲಿ ವಾಸವಾಗಿದ್ದ ಮನಮೋಹನ್ ರಾಯ್, ತಮ್ಮ ಕಾರನ್ನು ಸರ್ವಿಸ್ ಮಾಡಿಸಲೆಂದು ಪಿರಿಯಾಪಟ್ಟಣಕ್ಕೆ ತೆರಳಿದ್ದರು.
ಬಳಿಕ ವಾಪಸ್ ಬರುವಾಗ ಪಿರಿಯಾಪಟ್ಟಣದ ಬೂದಿತಿಟ್ಟು ಗ್ರಾಮದ ಬಳಿ ರಸ್ತೆ ಬದಿ ಕಾರು ನಿಲ್ಲಿಸಿದ್ದಾರೆ. ಕಾರಿನಲ್ಲಿ ಕುಳಿತ ಸ್ಥಿತಿಯಲ್ಲಿಯೇ ಮನಮೋಹನ್ ರಾಯ್ ಮೃತಪಟ್ಟಿದ್ದಾರೆ.
ಮನಮೋಹನ್ ರಾಯ್ ಹೃದಯಾಘಾತದಿಂದ ಮೃತಪಟ್ಟಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಗೌರಿ-ಗಣೇಶ ಹಬ್ಬದ ಸಂಭ್ರಮಕ್ಕೆ ಮಲೆನಾಡಿನ ಕಾಡುಗಳಲ್ಲಿ ಅರಳಿರುವ ವಿಶಿಷ್ಟ ಗೌರಿ ಹೂವು ಮತ್ತಷ್ಟು ಮೆರುಗು ನೀಡುತ್ತಿದೆ.…
ಮಂಜು ಕೋಟೆ ಗಣೇಶ ಮೂರ್ತಿಗಳ ಮಾರಾಟದಲ್ಲಿ ಹೆಚ್ಚಳ; ಪೈಪೋಟಿಗೆ ಇಳಿದಿರುವ ಯುವ ಸಮುದಾಯ ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಹಿಂದೂ ಸಮುದಾಯದವರು ಗೌರಿ-ಗಣೇಶ…
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…