ಮಡಿಕೇರಿ: ಮೊಬೈಲ್ ವಿಚಾರವಾಗಿ ಸಹೋದರನೊಂದಿಗೆ ಜಗಳವಾಡಿಕೊಂಡು ಮನೆಬಿಟ್ಟು ಹೋಗಿದ್ದ ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ
ಯುವತಿಯ ಮೃತದೇಹ ಎರಡು ದಿನಗಳ ನಂತರ ಕಾವೇರಿ ನದಿಯಲ್ಲಿ ಪತ್ತೆಯಾಗಿದೆ.
ಕುಶಾಲನಗರದ ಭಾವನಾ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಗಳಾಗಿದ್ದಾರೆ. 10ನೇ ತರಗತಿ ಮುಗಿಸಿ ಮನೆಯಲ್ಲಿದ್ದ ಭಾವನಾ ಬಿಡುವಿನ ವೇಳೆಯಲ್ಲಿ ತಂದೆಯ ಫ್ಯಾನ್ಸಿ ಸ್ಟೋರ್‌ನಲ್ಲಿ ನೆರವಾಗುತ್ತಿದ್ದಳು. ಇದೇ ಡಿಸೆಂಬರ್.8ರಂದು ಮೊಬೈಲ್ ವಿಚಾರವಾಗಿ ಭಾವನಾ ಹಾಗೂ ಆಕೆಯ ತಮ್ಮ ಮಹಿಪಾಲ್ ನಡುವೆ ಜಗಳವಾಗಿದೆ.
ಈ ವೇಳೆ ನಾಳೆ ಬರುವುದಾಗಿ ತಿಳಿಸಿ ಅಂಗಡಿಯಿಂದ ಹೊರ ನಡೆದ ಭಾವನಾ ಕಾಣೆಯಾಗಿರುವುದಾಗಿ ತಂದೆ ರಣಜಿತ್ ಸಿಂಗ್ ಕುಶಾಲನಗರ ಪಟ್ಟಣ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು.
ಈ ವೇಳೆ ಅಗ್ನಿಶಾಮಕ ದಳ ಸಿಬ್ಬಂದಿ ಸಹಕಾರದೊಂದಿಗೆ ನದಿಯಲ್ಲಿ ಪರಿಶೀಲಿಸಿದಾಗ ನಾಪತ್ತೆಯಾಗಿದ್ದ ಯುವತಿ ಮೃತದೇಹ ಪತ್ತೆಯಾಗಿದೆ. ಈ ಸಂಬಂಧ ಕುಶಾಲನಗರ ಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…