Mysore
21
overcast clouds

Social Media

ಸೋಮವಾರ, 03 ಆಗಸ್ಟ್ 2026
Light
Dark

ಮಡಿಕೇರಿ| ಯುವಕರ ಮೇಲೆ ಹಲ್ಲೆ ಪ್ರಕರಣ: ಎಲ್ಲಾ ಆರೋಪಿಗಳ ಬಂಧನ

ಮಡಿಕೇರಿ: ಕೊಡಗು ಜಿಲ್ಲೆಯ ನಾಪೋಕ್ಲುವಿನಲ್ಲಿ ನಡೆಯಲಿರುವ ಹಿಂದೂ ಸಂಗಮ ಕಾರ್ಯಕ್ರಮದ ಕುರಿತು ನಿನ್ನೆ ವಾಹನದಲ್ಲಿ ಪ್ರಚಾರ ಮಾಡುತ್ತಿದ್ದ ಗೌತಮ್‌ ಎಂಬಾತನ ಮೇಲೆ ಅನ್ಯಕೋಮಿನ ಯುವಕರು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಡೆದಿದೆ.

ಘಟನೆ ಸಂಬಂಧ ಹಲ್ಲೆ ನಡೆಸಿದ ಎಲ್ಲಾ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಸಿದ್ದಿಕ್‌, ಸುಹೆಲ್‌, ನಾಭಿ, ರಶೀದ್‌ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ.

ಜಿಲ್ಲೆಯಲ್ಲಿ ಕಳೆದು ಒಂದು ತಿಂಗಳಿನಿಂದ ಹಿಂದೂ ಸಂಗಮ ಕಾರ್ಯಕ್ರಮಗಳು ಶಾಂತಿಯುತವಾಗಿ ನಡೆಯುತ್ತಿವೆ. ಮಡಿಕೇರಿ ತಾಲ್ಲೂಕಿನ ಬಲ್ಲಮಾವಟಿ ಗ್ರಾಮದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ನಾಪೋಕ್ಲು ಪಟ್ಟಣದಲ್ಲಿ ಹಿಂದು ಯುವಕರು ಈ ಭಾಗದಲ್ಯಾಕೆ ಪ್ರಚಾರ ಮಾಡ್ತಿದ್ದೀರಾ ಎಂದು ಪ್ರಶ್ನೆ ಮಾಡಿ ಜಗಳ ಶುರು ಮಾಡಿದ್ದಾರೆ. ಹಿಂದೂ ಯುವಕರು-ಮುಸ್ಲಿಂ ಯುವಕರಿಗೆ ಶುರುವಾದ ಮಾತಿನ ಚಕಮಕಿ ವಿಕೋಪಕ್ಕೆ ಹೋಗಿ, ಕೊನೆಗೆ ಗೌತಮ್‌ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ. ಹಲ್ಲೆಯಿಂದ ಗಂಭೀರ ಗಾಯಗೊಂಡ ಗೌತಮ್‌ನನ್ನು ಕೂಡಲೇ ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

Tags:
error: Content is protected !!