ಮಡಿಕೇರಿ : ನಗರದ ಮೆಡಿಕಲ್ ಕಾಲೇಜು ಆವರಣದಲ್ಲಿ ಪೋಲಿ ಯುವಕರ ಪುಂಡಾಟ ಮಿತಿಮೀರಿದ್ದು, ಹಾಸ್ಟೇಲ್‌ಗೆ ಭದ್ರತೆ ಒದಗಿಸುವಂತೆ ಒತ್ತಾಯಿಸಿ ಕಾಲೇಜಿನ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.
ನಗರದ ಹೊರವಲಯದಲ್ಲಿರುವ ಮೆಡಿಕಲ್ ಕಾಲೇಜಿಗೆ ಯಾವುದೇ ಗೇಟ್ ವ್ಯವಸ್ಥೆ ಇಲ್ಲ. ವಿದ್ಯಾರ್ಥಿನಿಯರ ವಸತಿ ನಿಲಯವಿದ್ದರೂ ಯಾವುದೇ ಭದ್ರತೆ ಒದಗಿಸಿಲ್ಲ. ಕತ್ತಲಾಗುತ್ತಿದ್ದಂತೆ ಬೈಕ್, ಆಟೋಗಳಲ್ಲಿ ಆಗಮಿಸುವ ಯುವಕರು, ವಿಕೃತವಾಗಿ ವರ್ತಿಸುತ್ತಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ವಿದ್ಯಾರ್ಥಿಗಳು ಆಗ್ರಹಿಸಿದರು.
ವಿದ್ಯಾರ್ಥಿಯರ ಹಾಸ್ಟೆಲ್ ಸುತ್ತ ಅನಾಮಿಕ ವ್ಯಕ್ತಿಗಳ ಸುಳಿದಾಟದಿಂದ ವಿದ್ಯಾರ್ಥಿನಿಯರು ಆತಂಕದಲ್ಲಿ ದಿನದೂಡುವಂತಾಗಿದೆ. ಇಷ್ಟೇ ಅಲ್ಲದೆ ಮೆಡಿಕಲ್ ಕಾಲೇಜಿನಿಂದ ಹೊರಗೆ ಬರುವಾಗ ಇರುವ ನಿರ್ಜನ ರಸ್ತೆಯಲ್ಲೂ ಕಿರಿಕಿರಿ ಉಂಟಾಗುತ್ತಿದೆ. ಕೆಲ ವಿದ್ಯಾರ್ಥಿಗಳನ್ನು ಪುಂಡರು ತಡೆದು ತೊಂದರೆ ನೀಡುತ್ತಿರುವುದಾಗಿಯೂ ವಿದ್ಯಾರ್ಥಿಗಳು ಆರೋಪಿಸಿದರು.
ದೂರು ಕೊಟ್ಟರೂ ಮೆಡಿಕಲ್ ಕಾಲೇಜು ಆಡಳಿತ ಮಂಡಳಿ ಯಾವುದೇ ಶಿಸ್ತು ಕ್ರಮ ಕೈಗೊಳ್ಳುತ್ತಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದ ವಿದ್ಯಾರ್ಥಿನಿಯರು, ಗೇಟಿನಲ್ಲಿ ಭದ್ರತಾ ಸಿಬ್ಬಂದಿ ನಿಯೋಜಿಸಬೇಕು. ಅನಧಿಕೃತ ವ್ಯಕ್ತಿಗಳು ಕಾಲೇಜು ಆವರಣವನ್ನು ಪ್ರವೇಶಿಸುವುದನ್ನು ತಡೆಯಬೇಕೆಂದು ಒತ್ತಾಯಿಸಿದರು.
ಮಡಿಕೇರಿ ಮೆಡಿಕಲ್ ಕಾಲೇಜಿನಲ್ಲಿ ವಿಕೃತ ಕಾಮಿಗಳ ಕಾಟ ಮಿತಿಮೀರಿದ್ದು, ಹಾಸ್ಟೆಲ್ ಎದುರು ಕಾಮುಕರು ಅಶ್ಲೀಲ ವರ್ತನೆ ತೋರುತ್ತಿದ್ದಾರೆ. ನಡುರಾತ್ರಿ ಕ್ಯಾಂಪಸ್ ಪ್ರವೇಶಿಸುವ ಕಾಮುಕರು, ಹುಡುಗಿಯರ ಎದುರು ಬಟ್ಟೆ ಬಿಚ್ಚಿ ಅಸಭ್ಯವಾಗಿ ವರ್ತಿಸುತ್ತಿದ್ದಾರೆ. ಈ ಬಗ್ಗೆ ಸೂಕ್ತ ಭದ್ರತೆ ಒದಗಿಸುವಂತೆ ಪೊಲೀಸರಿಗೆ ದೂರು ನೀಡಲಾಯಿತು.
ಸ್ಥಳಕ್ಕೆ ಮಡಿಕೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮೈಸೂರು: ಹೊಸ ವರ್ಷಾಚರಣೆ ಹಾಗೂ ಕ್ರಿಸ್‌ಮಸ್‌ಗೆ ಮೈಸೂರು ನಗರಕ್ಕೆ ಪ್ರವಾಸಿಗರನ್ನು ಸೆಳೆಯುವ ದೃಷ್ಟಿಯಿಂದ ಅರಮನೆ ಆವರಣದಲ್ಲಿ ಫಲಪುಷ್ಪ ಪ್ರದರ್ಶನ ಒಳಗೊಂಡ…
ಮಂಡ್ಯ: ಈ ಜಿಲ್ಲೆಯು ಅಪ್ಪಟ ಕನ್ನಡಿಗರು ವಾಸಿಸುವ ಜಿಲ್ಲೆಯಾಗಿದ್ದು, ಕನ್ನಡ ಭಾಷೆ ಮತ್ತು ಸಂಸ್ಕೃತಿಯ ವಿಕಾಸಕ್ಕೆ ಈ ಜಿಲ್ಲೆಯ ಕೊಡುಗೆ…
ಮಂಡ್ಯ: ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ. ಈ ನಿಟ್ಟಿನಲ್ಲಿ 10ನೇ ತರಗತಿವರೆಗೆ ಕನ್ನಡ ಮಾಧ್ಯಮ ಕಡ್ಡಾಯವಾಗಬೇಕು. ಇಂಗ್ಲೀಷ್ ಮಾಧ್ಯಮದ ಶಾಲೆ ತೆರೆಯುವುದನ್ನು…
ಹನೂರು: ತಾಲ್ಲೂಕಿನ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಪಲ್ಟಿಯಾಗಿ ಇಬ್ಬರು ಗಾಯಗೊಂಡಿರುವ ಘಟನೆ ಜರುಗಿದೆ.…
ಕಲಬುರ್ಗಿ: ಸಂವಿಧಾನದ ವಿಧಿ 371 ( ಜೆ ) ಜಾರಿಗೆ ಬಂದ ನಂತರ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಹಾಗೂ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಕೆ ಪ್ರಕರಣ ವಿಚಾರವಾಗಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು…