ಕೊಡಗು

ಮೆಡಿಕಲ್ ಕಾಲೇಜು ಆವರಣದಲ್ಲಿ ಯುವಕರ ಪುಂಡಾಟ: ಸೂಕ್ತ ಭದ್ರತೆ ಒದಗಿಸಲು ವಿದ್ಯಾರ್ಥಿಗಳ ಒತ್ತಾಯ

ಮಡಿಕೇರಿ : ನಗರದ ಮೆಡಿಕಲ್ ಕಾಲೇಜು ಆವರಣದಲ್ಲಿ ಪೋಲಿ ಯುವಕರ ಪುಂಡಾಟ ಮಿತಿಮೀರಿದ್ದು, ಹಾಸ್ಟೇಲ್‌ಗೆ ಭದ್ರತೆ ಒದಗಿಸುವಂತೆ ಒತ್ತಾಯಿಸಿ  ಕಾಲೇಜಿನ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.

ನಗರದ ಹೊರವಲಯದಲ್ಲಿರುವ ಮೆಡಿಕಲ್ ಕಾಲೇಜಿಗೆ ಯಾವುದೇ ಗೇಟ್ ವ್ಯವಸ್ಥೆ ಇಲ್ಲ. ವಿದ್ಯಾರ್ಥಿನಿಯರ ವಸತಿ ನಿಲಯವಿದ್ದರೂ ಯಾವುದೇ ಭದ್ರತೆ ಒದಗಿಸಿಲ್ಲ. ಕತ್ತಲಾಗುತ್ತಿದ್ದಂತೆ ಬೈಕ್, ಆಟೋಗಳಲ್ಲಿ ಆಗಮಿಸುವ ಯುವಕರು, ವಿಕೃತವಾಗಿ ವರ್ತಿಸುತ್ತಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ವಿದ್ಯಾರ್ಥಿಗಳು ಆಗ್ರಹಿಸಿದರು.

ವಿದ್ಯಾರ್ಥಿಯರ ಹಾಸ್ಟೆಲ್ ಸುತ್ತ ಅನಾಮಿಕ ವ್ಯಕ್ತಿಗಳ ಸುಳಿದಾಟದಿಂದ ವಿದ್ಯಾರ್ಥಿನಿಯರು ಆತಂಕದಲ್ಲಿ ದಿನದೂಡುವಂತಾಗಿದೆ. ಇಷ್ಟೇ ಅಲ್ಲದೆ ಮೆಡಿಕಲ್ ಕಾಲೇಜಿನಿಂದ ಹೊರಗೆ ಬರುವಾಗ ಇರುವ ನಿರ್ಜನ ರಸ್ತೆಯಲ್ಲೂ ಕಿರಿಕಿರಿ ಉಂಟಾಗುತ್ತಿದೆ. ಕೆಲ ವಿದ್ಯಾರ್ಥಿಗಳನ್ನು ಪುಂಡರು ತಡೆದು ತೊಂದರೆ ನೀಡುತ್ತಿರುವುದಾಗಿಯೂ ವಿದ್ಯಾರ್ಥಿಗಳು ಆರೋಪಿಸಿದರು.

ದೂರು ಕೊಟ್ಟರೂ ಮೆಡಿಕಲ್ ಕಾಲೇಜು ಆಡಳಿತ ಮಂಡಳಿ ಯಾವುದೇ ಶಿಸ್ತು ಕ್ರಮ ಕೈಗೊಳ್ಳುತ್ತಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದ ವಿದ್ಯಾರ್ಥಿನಿಯರು, ಗೇಟಿನಲ್ಲಿ ಭದ್ರತಾ ಸಿಬ್ಬಂದಿ ನಿಯೋಜಿಸಬೇಕು. ಅನಧಿಕೃತ ವ್ಯಕ್ತಿಗಳು ಕಾಲೇಜು ಆವರಣವನ್ನು ಪ್ರವೇಶಿಸುವುದನ್ನು ತಡೆಯಬೇಕೆಂದು ಒತ್ತಾಯಿಸಿದರು.

ಮಡಿಕೇರಿ ಮೆಡಿಕಲ್ ಕಾಲೇಜಿನಲ್ಲಿ ವಿಕೃತ ಕಾಮಿಗಳ ಕಾಟ ಮಿತಿಮೀರಿದ್ದು, ಹಾಸ್ಟೆಲ್ ಎದುರು ಕಾಮುಕರು ಅಶ್ಲೀಲ ವರ್ತನೆ ತೋರುತ್ತಿದ್ದಾರೆ. ನಡುರಾತ್ರಿ ಕ್ಯಾಂಪಸ್ ಪ್ರವೇಶಿಸುವ ಕಾಮುಕರು, ಹುಡುಗಿಯರ ಎದುರು ಬಟ್ಟೆ ಬಿಚ್ಚಿ ಅಸಭ್ಯವಾಗಿ ವರ್ತಿಸುತ್ತಿದ್ದಾರೆ. ಈ ಬಗ್ಗೆ ಸೂಕ್ತ ಭದ್ರತೆ ಒದಗಿಸುವಂತೆ ಪೊಲೀಸರಿಗೆ ದೂರು ನೀಡಲಾಯಿತು.

ಸ್ಥಳಕ್ಕೆ ಮಡಿಕೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

andolanait

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

2 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

3 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

4 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

6 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

10 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

10 hours ago