ಕೊಡಗು

ಮಡಿಕೇರಿ| ಚಲಿಸುತ್ತಿದ್ದ ಕಾರಿನಲ್ಲಿ ಯುವಕರ ಪುಂಡಾಟ: ಪ್ರಕರಣ ದಾಖಲು

ವರದಿ : ನವೀನ್ ಡಿಸೋಜ, ಮಡಿಕೇರಿ

ಮಡಿಕೇರಿ: ಚಲಿಸುತ್ತಿದ್ದ ಕಾರಿನಲ್ಲಿ ಪುಂಡಾಟ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಯುವಕರ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಡಿಕೇರಿ-ಸುಳ್ಯ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಈ ಘಟನೆ ನಡೆದಿದ್ದು, ಕಾರಿನ ಹೊರಗಡೆ ನೇತಾಡುತ್ತಿದ್ದ ಆರು ಮಂದಿ ಯುವಕರಿಗೆ ಈಗ ಬಿಗ್‌ ಶಾಕ್‌ ಎದುರಾಗಿದೆ.

ಚಲಿಸುತ್ತಿದ್ದ ಕಾರಿನಲ್ಲಿ ನೇತಾಡಿ ಡಿಜೆ ಸಾಂಗ್‌ಗೆ ಡ್ಯಾನ್ಸ್‌ ಮಾಡುತ್ತಲೇ ಹೋಗುತ್ತಿದ್ದ ಆರು ಮಂದಿ ಯುವಕರ ಪುಂಡಾಟವನ್ನು ಹಿಂದೆ ಬರುತ್ತಿದ್ದ ಕಾರು ಚಾಲಕ ತಮ್ಮ ಮೊಬೈಲ್‌ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದಾರೆ.

ಸೋಷಿಯಲ್‌ ಮೀಡಿಯಾದಲ್ಲಿ ಈ ವಿಡಿಯೋ ಫುಲ್‌ ವೈರಲ್‌ ಆಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಯುವಕರ ವಿರುದ್ಧ ಪ್ರಕರಣ ದಾಖಲು ಮಾಡಿದ್ದಾರೆ.

ಮಡಿಕೇರಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಕಡೆಗೆ ತೆರಳುತ್ತಿದ್ದ ಕಾರು ಇದಾಗಿದ್ದು, ಪುಂಡಾಟ ಮೆರೆದಿದ್ದ ಯುವಕರು ಈಗ ಕಂಬಿ ಎಣಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ಆಂದೋಲನ ಡೆಸ್ಕ್

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

8 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

9 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

10 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

11 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

11 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

15 hours ago