ಕೊಳ್ಳೇಗಾಲ : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಪ್ರತಿಷ್ಠಾಪನೆಗೊಂಡ ಬಳಿಕ ಕೊಳ್ಳೇಗಾಲದಲ್ಲಿ ಇನ್ಮುಂದೆ ಅಭಿವೃದ್ಧಿ ಪರ್ವ ಪ್ರಾರಂಭವಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಹೇಳಿದರು.
ಪಟ್ಟಣದ ಎಸ್.ವಿ.ಕೆ ಕಾಲೇಜು ಸಮೀಪದ ಹೆದ್ದಾರಿಯ ರಸ್ತೆಯ ವೃತ್ತದಲ್ಲಿ ಇತ್ತೀಚೆಗೆ ಪ್ರತಿಷ್ಠಾಪನೆ ಮಾಡಿದ್ದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಳೆಯ ನಡುವೆಯೂ ಸಹಾ ಮಾಲಾರ್ಪಣೆ ಮಾಡಿ ಬಳಿಕ ಕೊಳ್ಳೇಗಾಲದ ಜನರ ಉದ್ದೇಶಿಸಿ ಮಾತನಾಡಿದರು.
ಗುತ್ತಿಗೆದಾರ ಓಲೆ ಮಹದೇವ ಸ್ವಂತ ಖರ್ಚಿನಲ್ಲಿ ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಾಣ ಮಾಡಿರುವುದು ಇತಿಹಾಸ ಸೇರಿದೆ. ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಾಣ ಮಾಡುವುದಕ್ಕೆ ಓಲೆ ಮಹದೇವು ಪುಣ್ಯ ಮಾಡಿದ್ದರು ಎಂದು ತಿಳಿಸಿದರು.
ಇಂದು ಅಂಬೇಡ್ಕರ್ ನೀಡಿದ ಸಂವಿಧಾನ ಮಾರ್ಗ ದರ್ಶನದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಜನ ಸೇವೆ ಮಾಡುತ್ತಿದೆ. ಅವರಿಂದಾಗಿ ಮಾತ್ರ ಇಂದು ನಾವೆಲ್ಲ ಜನಪ್ರತಿನಿಧಿಗಳಾಗಿ ನಿಮ್ಮ ಸೇವೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ಎಲ್ಲರೂ ಅಂಬೇಡ್ಕರ್ ಅವರ ಆಶಯ ಹಾಗೂ ಆದರ್ಶ ಗಳನ್ನು ಅಳವಡಿಸಿಕೊಂಡು ಜೀವನ ನಡೆಸೋಣ. ಬಿಜೆಪಿ ಸರ್ಕಾರ ಹಲವಾರು ಯೋಜನೆಗಳ ಮೂಲಕ ಅಂಬೇಡ್ಕರ್ ಅವರ ಚಿಂತನೆಗಳಲ್ಲಿ ದೇಶ ನಡೆಸುತ್ತಿದ ಎಂದರು.
ಈ ವೇಳೆ ಮುಖ್ಯ ಮಂತ್ರಿ ಬಸವರಾಜು ಬೊಮ್ಮಾಯಿ ಅವರನ್ನು ಸನ್ಮಾನಿಸಿ ಅಂಬೇಡ್ಕರ್ ಅವರ ಭಾವಚಿತ್ರ ನೀಡಿ ಗೌರವಿಸಲಾಯಿತು.
ಉಸ್ತುವಾರಿ ಸಚಿವ ವಿ.ಸೋಮಣ್ಣ, ಶಾಸಕ ಎನ್.ಮಹೇಶ್, ನಿರಂಜನ್ ಕುಮಾರ್, ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಡಾ.ದತ್ತೇಶ್ ಕುಮಾರ್, ಪ್ರತಿಮೆ ನಿರ್ಮಾತೃ ಓಲೆ ಮಹಾದೇವ ಇತರರು ಇದ್ದರು.
ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…
ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…
ಮಂಡ್ಯ : ಸಕ್ಕರೆ ನಗರ ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ರಾಜ್ಯ, ರಾಷ್ಟ್ರ ಹಾಗೂ…