ಜಿಲ್ಲೆಗಳು

ಗುಂಡಾಲ್ ಜಲಾಶಯ ಪ್ರದೇಶದಲ್ಲಿ ಕಾಡಾನೆಗಳ ಕಾಟ

ಕಾಮಗೆರೆ (ಕೊಳ್ಳೇಗಾಲ ತಾಲ್ಲೂಕು): ಗುಂಡಾಲ್ ಜಲಾಶಯಕ್ಕೆ ಸೇರಿದ ಪ್ರದೇಶದಲ್ಲಿ ಎರಡು ಕಾಡಾನೆಗಳು ನುಗ್ಗಿ ಜನರಲ್ಲಿ ಆತಂಕ ಸೃಷ್ಟಿಸಿವೆ.

ಸಂಗ್ರಹ ಚಿತ್ರ

ಒಂದು ಗಂಡು ಹಾಗೂ ಒಂದು ಹೆಣ್ಣು ಆನೆ ಎರಡು ದಿನದಿಂದ ಈ ಭಾಗದಲ್ಲಿ ಬೀಡು ಬಿಟ್ಟು ಹಲವಾರು ಜಮೀನುಗಳಲ್ಲಿ ಬೆಳೆ ನಾಶ ಮಾಡಿವೆ. ಕಣ್ಣೂರು ಗ್ರಾಮದಲ್ಲಿ ಮೊದಲು ಕಾಣಿಸಿಕೊಂಡ ಆನೆಗಳು ಆನಂತರ 4 ಮತ್ತೀಪುರ ಮಹದೇವಪ್ಪ ಅವರ ಜಮೀನಿಗೆ ನುಗ್ಗಿ ಮೆಕ್ಕೆ ಜೋಳ ಬೆಳೆ ನಾಶ ಮಾಡಿವೆ. ಮರಳು ಸೋಗೆ ಬಳಿಯೂ ಆನೆಗಳು ಇದ್ದುದನ್ನು ಜನ ನೋಡಿದ್ದಾರೆ. ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು. ಆಹಾರ ಹುಡುಕಿ ಬಂದಿರುವ ಆನೆಗಳನ್ನು ಕಾಡಿಗೆ ಅಟ್ಟಲು ಪ್ರಯತ್ನಿಸುತ್ತಿದ್ದಾರೆ.

ಈ ಕುರಿತು ಆಂದೋಲನದ ಜತೆ ಮಾತನಾಡಿದ ಮಲೈಮಹದೇಶ್ವರ ವನ್ಯಜೀವಿ ವಿಭಾಗದ ಡಿಸಿಎಫ್ ಡಾ.ಸಂತೋಷ್‌ಕುಮಾರ್, ನಿನ್ನೆಯೇ ಒಂದು ಆನೆ ಇರುವ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ್ದೇವೆ. ಈ ಪ್ರದೇಶದ ಕೆಲ ಭಾಗ ಬಿಆರ್‌ಟಿಗೆ ಬರಲಿದೆ. ನಮ್ಮ ಭಾಗದಲ್ಲಿ ಬುಧವಾರ ಆನೆಗಳನ್ನು ಕಾಡಿಗೆ ಅಟ್ಟುತ್ತೇವೆ ಎಂದು ತಿಳಿಸಿದರು.

andolanait

Recent Posts

ಚಿರತೆಗಳು ಕಾಣಿಸಿಕೊಳ್ಳುವಿಕೆ: ಮೈಸೂರಿನ ಅಭಿವೃದ್ಧಿಯ ಮತ್ತೊಂದು ಮುಖ

ಮೈಸೂರು ನಗರವು ತನ್ನ ಸಾಂಸ್ಕೃತಿಕ ಪರಂಪರೆ, ಹಸಿರು ಪರಿಸರ ಮತ್ತು ಸುಸ್ಥಿರ ಜೀವನಶೈಲಿಗಾಗಿ ಬಹಳ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ…

12 mins ago

ಮಾನವ ಹಕ್ಕುಗಳನ್ನು ಪೋಷಿಸುವ ಸಾಮಾಜಿಕ ನ್ಯಾಯದ ಪರಿಕಲ್ಪನೆ

ಯಾವುದೋ ಒಂದು ಹಕ್ಕು ಹೆಚ್ಚಿನ ಆದ್ಯತೆ ಹೊಂದಲು ಸಾಧ್ಯವೇ? ಕೆಲವು ಹಕ್ಕುಗಳು ಹೆಚ್ಚು ಮುಖ್ಯವಾಗುವವೇ? ಒಂದು ರೀತಿಯ ಹಕ್ಕಿನಿಂದ ಇನ್ನೊಂದು…

37 mins ago

ಅವೈಜ್ಞಾನಿಕ ಚರಂಡಿ ಕಾಮಗಾರಿಯಿಂದ ಕಿರಿಕಿರಿ

ಮನೆ ಮುಂಭಾಗ ತ್ಯಾಜ್ಯ ನೀರು ನಿಂತು ಗಬ್ಬುನಾರುತ್ತಿರುವ ಚರಂಡಿ ; ಸಾಂಕ್ರಾಮಿಕ ರೋಗ ಹರಡುವ ಭೀತಿ, ಚುನಾವಣೆ ಬಹಿಷ್ಕಾರಕ್ಕೆ ಸ್ಥಳೀಯರ…

1 hour ago

ಅಂಗನವಾಡಿಗಳಿಗೆ ೬ ತಿಂಗಳಿಂದ ಬಾರದ ಮೊಟ್ಟೆ ಹಣ!

ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…

4 hours ago

‘ತ್ಯಾಜ್ಯ ಸಂಸ್ಕರಣೆ, ವಿಲೇವಾರಿಗೆ ಕ್ರಮಕೈಗೊಳ್ಳಬೇಕು’

ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…

4 hours ago

ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿಗೆ ಪರದಾಟ

ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…

4 hours ago