ಕೊಳ್ಳೇಗಾಲ: ಅ.೧೬ರಂದು ನಾಳೆ ಮಧುವನಹಳ್ಳಿಯಲ್ಲಿರುವ ೨೨೦/೬೬/೧೧ ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈವಾಸಿಕ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಮಧುವನಹಳ್ಳಿ, ದೊಡ್ಡಿಂದುವಾಡಿ, ಕೊಳ್ಳೇಗಾಲ, ಕೊತ್ತನೂರು, ಕುಂತೂರು ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ಬೆಳಿಗ್ಗೆ ೧೦ರಿಂದ ಸಂಜೆ ೬ ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿದೆ. ಗ್ರಾಹಕರು ಎಂದಿನಂತೆ ಸಹಕರಿಸಬೇಕೆಂದು ಕೊಳ್ಳೇಗಾಲ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





