ಸಾಲಿಗ್ರಾಮ: ಪಟ್ಟಣದ ಪೊಲೀಸ್ ಠಾಣೆಯ ನೂತನ ಪೊಲೀಸ್ ಇನ್‌ಸ್ಪೆಕ್ಟರ್ ಆಗಿ ಜಿ.ಕೃಷ್ಣರಾಜು ಬುಧವಾರ ಅಧಿಕಾರ ಸ್ವೀಕರಿಸಿದರು.
ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಆಗಿ ಈ ಹಿಂದೆ ಕರ್ತವ್ಯ ನಿರ್ವಹಿಸುತ್ತಿದ್ದ ಆರ್.ಶ್ರೀಕಾಂತ್ ಅವರು ಚಾಮರಾಜನಗರ ಜಿಲ್ಲೆಗೆ ವರ್ಗಾವಣೆ ಗೊಂಡಿದ್ದು, ಅವರ ಸ್ಥಾನಕ್ಕೆ ಹಾಸನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಜಿ.ಕೃಷ್ಣರಾಜು ಅವರನ್ನು ವರ್ಗಾವಣೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಅವರು ಅಧಿಕಾರವನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಎಸ್‌ಐ ಎಸ್.ಕುಮುದ ಹಾಗೂ ಠಾಣೆಯ ಸಿಬ್ಬಂದಿ ಉಪಸ್ಥಿತರಿದ್ದರು.





