ಶ್ರೀರಂಗಪಟ್ಟಣ : ವಿಶ್ವ ಪ್ರಸಿದ್ಧ ಕೆಆರ್ ಎಸ್ ಬೃಂದಾವನದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
ಶುಕ್ರವಾರ ಎಂದಿನಂತೆ ಪ್ರವಾಸಿಗರಿಂದ ಶುಲ್ಕ ಪಡೆದು ಬೃಂದಾವನ ವೀಕ್ಷಣೆಗೆ ಅವಕಾಶ ನೀಡಲಾಗಿತ್ತು. ದಿಢೀರ್ ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪ್ರವಾಸಿಗರನ್ನು ಹಿಂದಕ್ಕೆ ಕಳುಹಿಸಲಾಗಿದೆ. ಆ ವೇಳೆ ಪ್ರವಾಸಿಗರು ಹಾಗೂ ಸಿಬ್ಬಂದಿ ವಿರುದ್ಧ ಮಾತಿನ ಚಕಮಕಿಯೂ ನಡೆದಿದೆ. ವಾರದ ಹಿಂದೆಯೇ ಚಿರತೆ ಕಾಣಿಸಿಕೊಂಡಿತ್ತು. ಅರಣ್ಯ ಇಲಾಖೆ ಬೋನು ಇಟ್ಟಿದ್ದರೂ ಚಿರತೆ ಬೋನಿಗೆ ಬಿದ್ದಿರಲಿಲ್ಲ. ಆದರೂ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಇದು ಚರ್ಚೆಗೆ ಗ್ರಾಸವಾಗಿದೆ.
ಇಂದು ಪ್ರವೇಶ ನಿಷೇಧ:
ಶನಿವಾರ ಕೆಆರ್ ಎಸ್ ಬೃಂದಾವನ ಪ್ರವಾಸಿಗರ ಪ್ರವೇಶ ನಿಷೇಧಿಸಿ ಕಾವೇರಿ ನೀರಾವರಿ ನಿಗಮ ಇಇ ರಾಮಮೂರ್ತಿ ಆದೇಶ ನೀಡಿದ್ದಾರೆ. ಕಳೆದ ನಾಲ್ಕೈದು ದಿನಗಳ ಹಿಂದೆ ಚಿರತೆ ಪ್ರತ್ಯಕ್ಷವಾಗಿತ್ತು ಆ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳ ಮಾರ್ಗದರ್ಶನದ ಮೇರೆಗೆ ಪ್ರವಾಸಿಗರಿಗೆ ಪ್ರವೇಶ ಮಾಡಲು ಅವಕಾಶ ಕಲ್ಪಿಸಲಾಗಿತ್ತು. ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪ್ರವೇಶಕ್ಕೆ ನಿರ್ಬಂಧ ವಿದಿಸಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಂದು ತಮ್ಮ ನಿವಾಸದ ಬಳಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಕೆಲ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಜೊತೆಗೆ ವಿವಿಧ ಜಿಲ್ಲೆಗಳಲ್ಲಿಯೂ ಗಾಳಿಯ ಗುಣಮಟ್ಟ ಕಳಪೆ…
ಬೆಂಗಳೂರು: ಬಿಜೆಪಿ ದೃಷ್ಟಿಯಲ್ಲಿಟ್ಟುಕೊಂಡು ದ್ವೇಷ ಭಾಷಣ ಕಾಯ್ದೆಯನ್ನು ತಂದಿಲ್ಲ. ಇದರಲ್ಲಿ ಬಿಜೆಪಿಯವರು ರಾಜಕಾರಣ ಮಾಡಲು ಹೊರಟಿದ್ದಾರೆ ಎಂದು ಗೃಹ ಸಚಿವ…
ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಮತ್ತೆ ಸ್ಟಾರ್ ವಾರ್ ಶುರುವಾಗಿದೆ. ಕಿಚ್ಚ ಸುದೀಪ್ ನೀಡಿದ ಆ ಒಂದು ಹೇಳಿಕೆಯಿಂದ ಡಿ ಬಾಸ್ ಅಭಿಮಾನಿಗಳು…
ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು, ಈ ವಿಷಯದಲ್ಲಿ ಹೈಕಮಾಂಡ್ ತೀರ್ಮಾನವೇ…
ಬೆಳಗಾವಿ: ಮೈಸೂರಿನಲ್ಲಿ ನಡೆಯುವ ವಿಶ್ವ ರೈತ ಸಮಾವೇಶಕ್ಕೆ ತೆರಳುತ್ತಿದ್ದ ವಾಹನ ಪಲ್ಟಿಯಾಗಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಬೈಲಹೊಂಗಲ…