ಜಿಲ್ಲೆಗಳು

ಕರಾಮುವಿ : ಕುಲಪತಿ ನೇಮಕ ಪ್ರಕ್ರಿಯೆ ಶುರು

ಕುಲಪತಿ, ಕುಲಸಚಿವ ಹುದ್ದೆಗಳೆರಡೂ ಪ್ರಭಾರ
ಮೈಸೂರು:ರಾಜ್ಯದಲ್ಲಿ ದೂರ ಶಿಕ್ಷಣ ನೀಡುವ ಕೇಂದ್ರವೆಂದು ಹೆಸರು ಪಡೆದಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯಕ್ಕೆ ನೂತನ ಕುಲಪತಿಯನ್ನು ನೇಮಿಸುವ ಸಂಬಂಧ ಶೀಘ್ರದಲ್ಲೇ ಸರ್ಚ್ ಕಮಿಟಿ ನೇಮಕ ಮಾಡಲಾಗುತ್ತಿದ್ದು, ಅಕ್ಟೋಬರ್ ಅಂತ್ಯದೊಳಗೆ ಕುಲಪತಿ ಸ್ಥಾನಕ್ಕೆ ಹೊಸಬರನ್ನು ನಿಯೋಜಿಸುವ ಸಾಧ್ಯತೆ ಇದೆ.
ಇದಕ್ಕೆ ಪೂರಕವಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲುಂದ ಕುಲಪತಿ ಹುದ್ದೆಗೆ ಅರ್ಹತೆಯುಳ್ಳ ಪ್ರಾಧ್ಯಾಪಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕುಲಪತಿಯಾಗಿದ್ದ ಪ್ರೊ.ಎಸ್.ವಿದ್ಯಾಶಂಕರ್ ಅವರು ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಕುಲಪತಿಯಾಗಿ ನಿಯೋಜನೆಗೊಂಡಿದ್ದರಿಂದ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ ಬಳಿಕ ಎರಡು ಮಹತ್ವದ ಹುದ್ದೆಗಳು ಖಾಲಿಯಾಗಿದೆ.
ಮುಕ್ತ ವಿವಿಯ ಕುಲಸಚಿವರಾಗಿದ್ದ ಪ್ರೊ.ಆರ್.ರಾಜಣ್ಣ ಅವರ ಸೇವಾವಧಿ ಜೂನ್‌ನಲ್ಲೇ ಮುಗಿದಿದ್ದರಿಂದ ತೆರವಾದ ಸ್ಥಾನಕ್ಕೆ ಹಣಕಾಸು ಅಧಿಕಾರಿ ಡಾ.ಎ.ಖಾದರ್‌ಪಾಷ ಅವರು ಪ್ರಭಾರ ಕುಲಪತಿ ಹಾಗೂ ಕುಲಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಹೀಗಾಗಿ, ಆಡಳಿತಾತ್ಮಕ ಮತ್ತು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲು ಸಾಧ್ಯವಾಗದ ಕಾರಣ ಶೀಘ್ರದಲ್ಲೇ ಕುಲಪತಿ ಹುದ್ದೆಯನ್ನು ನೇಮಿಸುವುದಕ್ಕೆ ರಾಜ್ಯಪಾಲರು ನಿರ್ಧರಿಸಿದ್ದಾರೆ.
ಅಭ್ಯರ್ಥಿಗಳು ವಿಶ್ವವಿದ್ಯಾಲಯ ಧನ ಸಹಾಯಗಳ ಆಯೋಗದ ವಾರ್ಗಸೂಚಿಗಳು ಹಾಗೂ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಅಧಿನಿಯಮ, ೧೯೯೨ ರನ್ವಯ ಕನಿಷ್ಠ ೧೦ ವರ್ಷಗಳ ಕಾಲ ಪ್ರಾಧ್ಯಾಪಕರ ಅಥವಾ ತತ್ಸವಾನ ಹುದ್ದೆಯ ಕಾರ್ಯಾನುಭವ ಹೊಂದಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಿದೆ.
ಶೀಘ್ರ ಕಮಿಟಿ ನೇಮಕ: ಕುಲಪತಿ ನೇಮಕಕ್ಕೆ ಸಂಬಂಧಿಸಿದ ಹಿರಿಯ ಶಿಕ್ಷಣ ತಜ್ಞರನ್ನೊಳಗೊಂಡ ಸರ್ಚ್ ಕಮಿಟಿಯನ್ನು ನೇಮಕ ಮಾಡಲಾಗುತ್ತದೆ. ಅರ್ಜಿ ಹಾಕುವ ಪ್ರತಿಯೊಬ್ಬರ ಬಗ್ಗೆ ಸಂಪೂರ್ಣ ಪರಿಶೀಲನೆ ನಡೆಸಿ ಮಾಹಿತಿ ಸಂಗ್ರಹಿಸಿದ ನಂತರ ಮೂವರು ಹೆಸರನ್ನು ಶಿಫಾರಸ್ಸು ಮಾಡಲಾಗುತ್ತದೆ. ಈ ಮೂವರಲ್ಲಿ ಯಾರನ್ನು ಬೇಕಾದರೂ ನೇಮಿಸುವ ಅಧಿಕಾರ ರಾಜ್ಯಪಾಲರಿಗೆ ಇರುತ್ತದೆ. ಒಂದು ವೇಳೆ ರಾಜ್ಯಪಾಲರೇ ರಾಜಭವನದ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ನೇರವಾಗಿ ನೇಮಕ ಮಾಡಿ ಆದೇಶ ಹೊರಡಿಸುವುದು ಸರ್ವೆ ಸಾಮಾನ್ಯವಾಗಿದೆ.


ಸದ್ದಿಲ್ಲದೆ ಹಲವರ ಲಾಬಿ
ಕುಲಪತಿ ಸ್ಥಾನಕ್ಕೆ ಹಲವರು ಅರ್ಜಿ ಸಲ್ಲಿಸಿದ ಬಳಿಕ ಲಾಭಿ ಆರಂಭಿಸುವ ಸಾಧ್ಯತೆ ಇದೆ. ಈಗಾಗಲೇ ಮೈಸೂರು ವಿವಿ,ಮುಕ್ತ ವಿವಿಯ ಕುಲಸಚಿವರಾಗಿ ಕಾರ್ಯ ನಿರ್ವಹಿಸಿ ನಿವೃತ್ತಿಯಾಗಿರುವ ಪ್ರೊ.ಆರ್.ರಾಜಣ್ಣ, ಅದೇ ರೀತಿ ಪರೀಕ್ಷಾಂಗ ಕುಲಸಚಿವ ಪ್ರೊ.ಕೆ.ಬಿ.ಪ್ರವೀಣ್ ಕುಲಪತಿ ಸ್ಥಾನದ ಮೇಲೂ ಕಣ್ಣಿಟ್ಟಿದ್ದಾರೆ. ಅ.೨೭ಕ್ಕೆ ಅರ್ಜಿ ಸಲ್ಲಿಸುವ ಗಡುವು ಮುಕ್ತಾಯವಾಗಲಿದೆ. ರಾಜಕೀಯ ಪ್ರಭಾವ,ಜಾತಿ ಮತ್ತು ರಾಜ್ಯಪಾಲರ ಮನಗೆಲ್ಲುವವರಿಗೆ ಕುಲಪತಿ ಹುದ್ದೆ ಒಲಿಯಲಿದೆ. ಈ ಮೊದಲು ರಾಜ್ಯಸರ್ಕಾರ ನೇಮಕ ಮಾಡುತ್ತಿದ್ದಾಗ ಸಚಿವರು,ಶಾಸಕರು ತಮ್ಮ ಹತ್ತಿರದ ವ್ಯಕ್ತಿಗಳ ಪರವಾಗಿ ಲಾಬಿ ಮಾಡುತ್ತಿದ್ದರು.ಈಗ ರಾಜ್ಯಪಾಲರು ನೇಮಕ ಮಾಡುವ ಕಾರಣ ದೊಡ್ಡಮಟ್ಟದಲ್ಲಿ ಶಿಫಾರಸ್ಸು ಮಾಡಿಸಿದವರಿಗೆ ಸಿಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

4 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

5 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

6 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

6 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

7 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

8 hours ago