ಬೆಂಗಳೂರು:-ಕಳೆದ ನವೆಂಬರ್ 18ರಿಂದ ರಾಜ್ಯಾದ್ಯಂತ ಪಂಚರತ್ನ ರಥಯಾತ್ರೆ ಕೈಗೊಂಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೊಸ ದಾಖಲೆಗೆ ಪಾತ್ರರಾಗಿದ್ದಾರೆ. ಪಂಚರತ್ನ ರಥಯಾತ್ರೆಯಲ್ಲಿ ರಾಜ್ಯದ ಜನರು ವಿವಿಧ ಬಗೆಯ ಬೃಹತ್ ಹಾರಗಳನ್ನು ಹಾಕಿ ಗೌರವಿಸಿದ ಹಿನ್ನೆಲೆಯಲ್ಲಿ ಮಾಜಿ ಸಿಎಂ ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ‘ ಹಾಗೂ ‘ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ‘ ದಾಖಲೆಗೆ ಪಾತ್ರರಾಗಿದ್ದಾರೆ.
ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ದಿನ ಯಾತ್ರೆ ನಡೆಸಿ ಕಳೆದ ರಾತ್ರಿ ಕ್ಷೇತ್ರದ ಯಲ್ಲಾಪುರದಲ್ಲಿ ಮಾಜಿ ಮುಖ್ಯಮಂತ್ರಿಗಳು ಗ್ರಾಮ ವಾಸ್ತವ್ಯ ಹೂಡಿದ್ದರು. ಆ ಗ್ರಾಮಕ್ಕೆ ಆಗಮಿಸಿದ ‘ ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ‘ ತೀರ್ಪುಗಾರರಾದ ಮೋಹಿತ್ ಕುಮಾರ್ ವತ್ಸ ಹಾಗೂ ‘ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ‘ ತೀರ್ಪುಗಾರರಾದ ಆರ್.ಹರೀಶ್ ಅವರು ಮಾಜಿ ಮುಖ್ಯಮಂತ್ರಿ ಅವರಿಗೆ ಎರಡೂ ದಾಖಲೆಗಳ ಪತ್ರಗಳು ಮತ್ತು ಮೆಡಲ್ ಗಳನ್ನು ಹಸ್ತಾಂತರ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ‘ ತೀರ್ಪುಗಾರರಾದ ಮೋಹಿತ್ ಕುಮಾರ್ ಅವರು, ಇದೊಂದು ವಿಶೇಷವಾದ ದಾಖಲೆ. ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ರಾಜಕಾರಣಿಯೊಬ್ಬರು ಗೌರವಕ್ಕೆ ಪಾತ್ರರಾಗಿರುವುದು ಹಾಗೂ ರೈತರೇ ಬೆಳೆದ ಬೆಳೆಗಳನ್ನೇ ಬೃಹತ್ ಹಾರಗಳನ್ನಾಗಿ ತಯಾರಿಸಿ ಅವರಿಗೆ ಹಾಕಿ ಸ್ವಾಗತಿಸುತ್ತಿರುವುದು ಸೋಜಿಗ, ಮೊದಲ ದಾಖಲೆ ಎಂದರು.
ನಾವು ಸದಾ ದಾಖಲೆಗಳನ್ನು ಹುಡುಕುತ್ತಿರುತ್ತೇವೆ. ದೇವನಹಳ್ಳಿ ವಿಧಾನಸಭೆ ಕ್ಷೇತ್ರದಲ್ಲಿ ನಡೆದ ಪಂಚರತ್ನ ರಥಯಾತ್ರೆ ಸಂದರ್ಭದಲ್ಲಿ ಕುಮಾರಸ್ವಾಮಿ ಅವರಿಗೆ ಕೃಷಿ ಬೆಳೆಗಳಿಂದ ತಯಾರಿಸಿದ ಭಾರೀ ಹಾರಗಳನ್ನು ಹಾಕಿ ಬರಮಾಡಿಕೊಂಡ ಬಗ್ಗೆ ಮಾಹಿತಿ ಸಿಕ್ಕಿತು. ಅಂದಿನಿಂದಲೇ ನಾವು ಖುದ್ದು ಪರಿಶೀಲನೆ ಮಾಡಿದೆವು. ನಾವು ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ರಥಯಾತ್ರೆಯ ಜತೆಗೆ ಪ್ರವಾಸ ಮಾಡಿದೆವು. ಬೃಹತ್ ಹಾರಗಳ ಗೌರವಕ್ಕೆ ಭಾಜನರಾದ ಏಕೈಕ ವ್ಯಕ್ತಿ ಕುಮಾರಸ್ವಾಮಿ ಅವರು ಎಂದು ಮೋಹಿತ್ ಕುಮಾರ್ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಇದು ನನಗೆ ಅಚ್ಚರಿಯ ಗೌರವ. ಈ ದಾಖಲೆಗಳನ್ನು ನನ್ನ ನಾಡಿನ ರೈತರು ಹಾಗೂ ನಮ್ಮ ಪಕ್ಷದ ಕಾರ್ಯಕರ್ತರಿಗೆ ಸಮರ್ಪಣೆ ಮಾಡುತ್ತೇನೆ ಎಂದರು. ನಾನು ರಥಯಾತ್ರೆ ಮಾಡುತ್ತಿರುವ ಎಲ್ಲಾ ಕಡೆ ಜನರು ನನ್ನನ್ನು ಪ್ರೀತಿಯಿಂದ ಸ್ವಾಗತ ಮಾಡುತ್ತಿದ್ದಾರೆ. ದೊಡ್ಡ ದೊಡ್ಡ ಹಾರಗಳನ್ನು ಹಾಕಿ ಸ್ವಾಗತ ಮಾಡುತ್ತಿದ್ದಾರೆ. ಆ ಜನರ ಪ್ರೀತಿಯಿಂದ ಮಾತ್ರ ಈ ದಾಖಲೆ ನಿರ್ಮಾಣವಾಗಲು ಸಾಧ್ಯವಾಗಿದೆ. ಹೀಗಾಗಿ ಈ ಎಲ್ಲಾ ದಾಖಲೆಯ ಹೆಗ್ಗಳಿಕೆ ಅವರಿಗೇ ಸಲ್ಲಬೇಕು ಎಂದು ತಿಳಿಸಿದರು.
ಇನ್ನೊಂದೆಡೆ ಪಂಚರತ್ನ ಯಾತ್ರೆ 34ನೆ ದಿನಕ್ಕೆ ಕಾಲಿಟ್ಟಿದೆ. ಹಾರಗಳ ಸಂಖ್ಯೆ 500ರ ಗಡಿ ದಾಟಿದೆ. ತುಮಕೂರು ಗ್ರಾಮಾಂತರ ಕ್ಷೇತ್ರ ಒಂದರಲ್ಲೇ 30ಕ್ಕೂ ಹೆಚ್ಚು ಬೃಹತ್ ಹಾರಗಳನ್ನು ಮಾಜಿ ಮುಖ್ಯಮಂತ್ರಿ ಅವರಿಗೆ ಹಾಕಿ ಗೌರವಿಸಲಾಯಿತು. ಈ ಕ್ಷೇತ್ರದಲ್ಲಿ ಸೇಬು, ಸೌತೆಕಾಯಿ, ಕೊಬ್ಬರಿ, ಕಬ್ಬಿನ ಹಾರಗಳ ಜತೆಗೆ ನಾಣ್ಯದ ಹಾರ, ಭತ್ತ ನೇಗಿಲು ಹಾರ, ಎತ್ತಿನ ಲಾಳದ ಹಾರ, ಜೆಡಿಎಸ್ ಚಿಹ್ನೆ ಹಾರ, ಕಿರೀಟದ ಹಾರ, ಮಹಿಳೆಯರು ಹಾಕಿದ ರಾಖಿ ಹಾರ ಗೂಳೂರು ಕರ್ಜಿಕಾಯಿ ಹಾರ, ವಿವಿಧ ತರಕಾರಿಗಳ ಹಾರ, ವಿವಿಧ ಹಣ್ಣುಗಳ ಹಾರ, ಎಲ್ ಇ ಡಿ ಹಾರ ಸೇರಿದಂತೆ ಒಂದೇ ದಿನ 30ಕ್ಕೂ ಹೆಚ್ಚು ಹಾರಗಳನ್ನು ಕುಮಾರಸ್ವಾಮಿ ಅವರಿಗೆ ಹಾಕಿ ಸ್ವಾಗತ ಕೋರಲಾಗಿತ್ತು.
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…
ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…
ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…
ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…
ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…
ಹೈದರಾಬಾದ್ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…