ಮಂಡ್ಯ ಅಂಬಿಗರಪುರದಲ್ಲಿ ಮಲೆ ಮಹದೇಶ್ವರ ಕುಂಭ ಮೇಳ ಆರಂಭ. ಸ್ವಾಮೀಜಿಗಳ ಸಮ್ಮುಖದಲ್ಲಿ ಡಾ. ವೀರೇಂದ್ರ ಹೆಗ್ಗಡೆ ಉದ್ಘಾಟನೆ
ಮಂಡ್ಯ : ಮಲೈ ಮಹದೇಶ್ವರ ಮಹಾ ಕುಂಭಮೇಳ ಮಹೋತ್ಸವವನ್ನು ರಾಜ್ಯಸಭಾ ಸದಸ್ಯರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ ವೀರೇಂದ್ರ ಹೆಗ್ಗಡೆ ರವರು ಉದ್ಘಾಟನೆ ಮಾಡಿದರು.
ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ, ಶ್ರೀರಾಮಕೃಷ್ಣ ಆಶ್ರಮದ ಅಧ್ಯಕ್ಷರು ಸ್ವಾಮಿ ಮುಕ್ತಿದಾನಂದ ಜೀ ಮಹಾರಾಜ್, ಕಾಗಿನೆಲೆ ಕನಕಗುರು ಪೀಠ ಶ್ರೀ ಶ್ರೀ ಶಿವಾನಂದಪುರಿ ಸ್ವಾಮೀಜಿ, ಬೇಬಿ ಮಠ ಮತ್ತು ಚಂದ್ರವನ ಆಶ್ರಮ

ಶ್ರೀ ಶ್ರೀ ಡಾ.ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ, ಶ್ರೀ ಮಲೆ ಮಹದೇಶ್ವರ ಬೆಟ್ಟ ಸುಕ್ಷೇತ್ರ ಶ್ರೀ ಸಾಲೂರು ಬೃಹನ್ಮಠ ಪೀಠಾಧ್ಯಕ್ಷರು ಶ್ರೀ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿಯವರು,ಅಬಕಾರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಕೆ.ಗೋಪಾಲಯ್ಯ,
ರೇಷ್ಮೆ, ಯುವಸಬಲೀಕರಣ ಹಾಗೂ ಕ್ರೀಡೆ ಸಚಿವರಾದ ಡಾ. ನಾರಾಯಣಗೌಡ,ಉನ್ನತ ಶಿಕ್ಷಣ ಸಚಿವರಾದ ಡಾ.ಸಿ.ಎನ್ ಅಶ್ವಥ್ ನಾರಾಯಣ್,ಮುಜರಾಯಿ ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ, ಜಿಲ್ಲಾಧಿಕಾರಿ ಎಸ್.ಅಶ್ವತಿ, ಜಿ.ಪಂ. ಸಿಇಒ ಶಾಂತ ಎಲ್. ಹುಲ್ಮನಿ, ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಉಪವಿಭಾಗಾಧಿಕಾರಿ ಬಿ.ಸಿ ಶಿವಾನಂದಮೂರ್ತಿ, ತಹಶೀಲ್ದಾರ್ ರೂಪ,ಸಣ್ಣ ಸ್ವಾಮಿಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.





