ಜಿಲ್ಲೆಗಳು

ಕುಪ್ಪಣ್ಣ ಪಾರ್ಕಿನಲ್ಲಿ ಸೆ.26ರಿಂದ ಅ.5ರವರೆಗೆ ಫಲಪುಷ್ಪ ಪ್ರದರ್ಶನ

ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಪ್ರಯುಕ್ತ 2022-23ನೇ ಸಾಲಿನ ದಸರಾ ಫಲಪುಷ್ಪ ಪ್ರದರ್ಶನವನ್ನು ನಿಶಾದ್ ಭಾಗ್ ಕುಪ್ಪಣ್ಣ ಪಾರ್ಕ್ ಇಲ್ಲಿ ಸೆ.26ರಿಂದ ಅ.5ರವರೆಗೆ ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪೂರ್ಣಿಮಾ ಬಿ.ಆರ್.ತಿಳಿಸಿದರು.
ಕುಪ್ಪಣ್ಣ ಪಾರ್ಕ್ ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ಈ ಬಾರಿ ಅದ್ಧೂರಿಯಾಗಿ ರಾಷ್ಟ್ರಪತಿ ಭವನವನ್ನು ಕೆಂಪು, ಬಿಳಿ ಗುಲಾಬಿ ಹಾಗೂ ಸೇವಂತಿ ಗಳಿಂದ ಸುಮಾರು 20ಅಡಿ ಎತ್ತರದಲ್ಲಿ ಗಾಜಿನ ಮನೆಯಲ್ಲಿ ನಿರ್ಮಿಸಲಾಗುವುದು. ದಿ.ನಟ ಪುನೀತ್ ರಾಜ್ ಕುಮಾರ್ ಸ್ಮರಣಾರ್ಥವಾಗಿ ಈ ಬಾರಿ ಪುನೀತ್ ರಾಜ್ ಕುಮಾರ್ ಅವರ ಸಾಧನೆಯ ವಿವರದೊಂದಿಗೆ ಪುತ್ಥಳಿಗಳನ್ನು ಸ್ಥಾಪಿಸಿ ಹೂವಿನೊಂದಿಗೆ ಅಲಂಕರಿಸಲಾಗುವುದು.

ಮೈಸೂರು ರಾಜರು ತಮ್ಮ ಆಳ್ವಿಕೆಯ ಸಮಯದಲ್ಲಿ ಜನರು ವಿಶ್ರಾಂತಿ ಪಡೆಯಲು ತಂಡೀ ಸಡಕ್ ನ್ನು ನಿರ್ಮಿಸುತ್ತಿದ್ದರು. ಅದರ ಪ್ರತಿರೂಪವನ್ನು ಗಾಜಿನ ಮನೆಯ ಮುಂದೆ ನಿರ್ಮಿಸಲಾಗುತ್ತದೆ ಎಂದರು.
7ಅಡಿ ಜೇನುಹುಳು, 12ಅಡಿ ಜಿರಾಫೆ ಹಾಗೂ ಮಕ್ಕಳಿಗೆ ಸಂಬಂಧಿಸಿದ ಹಲವು ಗೊಂಬೆಗಳನ್ನು ಹೂವಿನಿಂದ ಅಲಂಕರಿಸಲಾಗುವುದು. 7ಅಡಿ ದಪ್ಪ ಮೆಣಸಿನ ಕಾಯಿಯಿಂದ ಒಂದು ಮನೆಯನ್ನು ನಿರ್ಮಿಸಲಾಗುವುದು ಎಂದರು. ಇತರ ವೈವಿಧ್ಯಮಯದಿಂದ ಕೂಡಿದ ಕಾನ್ಸೆಪ್ಟ್ ಗಳನ್ನು ನಿರ್ಮಿಸಲಾಗುವುದು. ಡೈರಿ ಡೇ, ಉಲ್ಲಾಸ್ ಅಗರ್ ಬತ್ತೀಸ್, ಸುವರ್ಣ ಚಾನೆಲ್ ಪ್ರಾಯೋಜಕತ್ವ ವಹಿಸಿದ್ದು, ಸಂಜೆಯ ವೇಳೆ ಅನೇಕ ಮನರಂಜನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಇಲಾಖೆಯಿಂದ 50ಸಾವಿರಕ್ಕೂ ಹೆಚ್ಚು ಹೂವಿನ ಗಿಡಗಳನ್ನು ಬೆಳೆದಿದ್ದು ಇಡೀ ಕುಪ್ಪಣ್ಣ ಪಾರ್ಕ್ ನ್ನು ಹೂವುಗಳಿಂದ ಅಲಂಕರಿಸಲಾಗುವುದು. ಅವುಗಳಲ್ಲಿ ಮುಖ್ಯವಾಗಿ ಮಾರಿಗೋಲ್ಡ್, ಫ್ರೆಂಚ್ ಮಾರಿಗೋಲ್ಡ್, ಜಿನಿಯಾ, ಡಾಲಿಯಾ ಸೇರಿದಂತೆ ಹಲವು ಪ್ರಭೇದದ ಹೂವಿನ ಗಿಡಗಳು, ಪುಣೆಯಿಂದ ವಿಶೇಷ ಅಲಂಕಾರಿಕ ಗಿಡಗಳನ್ನು ತರಲಾಗುತ್ತಿದೆ ಎಂದು ತಿಳಿಸಿದರು. ಅಲ್ಲದೆ ಇಲಾಖೆಗೆ ಸಂಬಂಧಿಸಿದ ಮಳಿಗೆಗಳು, ಸಾವಯವ ಮಳಿಗೆಗಳು, ಕೃಷಿಗೆ ಸಂಬಂಧಿಸಿದ ಮಳಿಗೆಗಳು ಐಐಹೆಚ್ ಆರ್, ಸಿಡಿಬಿ, ಎನ್ ಹೆಚ್ ಬಿ, ಸಿಎಫ್ ಟಿಆರ್ ಐ ಸಂಸ್ಥೆಗಳಿಗೆ ಪತ್ರ ಬರೆದಿದ್ದು ರೈತರಿಗೆ ದೊರಕುವ ಸೌಲಭ್ಯಗಳ ಬಗ್ಗೆ ಹೆಚ್ಚಿನ ಮಾಹಿತಿ ನೀಡಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ಭಿತ್ತಿ ಪತ್ರವನ್ನು ಬಿಡುಗಡೆಗೊಳಿಸಲಾಯಿತು. ಸುದ್ದಿಗೋಷ್ಠಿಯಲ್ಲಿ ದಸರಾ ಉಪಸಮಿತಿಯ ಫಲಪುಷ್ಪ ಪ್ರದರ್ಶನ ಸಮಿತಿಯ ಅಧ್ಯಕ್ಷ ಎಸ್.ಆರ್.ನಂಜಪ್ಪ, ಉಪಾಧ್ಯಕ್ಷರಾದ ಓಂ ಶ್ರೀನಿವಾಸ, ಸುಶೀಲಾ ಮತ್ತಿತರು ಉಪಸ್ಥಿತರಿದ್ದರು.

andolanait

Recent Posts

ಮೈಸೂರಿನಲ್ಲಿ ಮಾಗಿ ಉತ್ಸವ: ಸಂಗೀತದ ಹೊನಲು ಹರಿಸಿದ ವಿಜಯ್‌ ಪ್ರಕಾಶ್‌

ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್‌ ಪ್ರಕಾಶ್‌ ಅವರು…

7 hours ago

ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…

7 hours ago

ರೈತರಿಗೆ ಮತ್ತೊಂದು ಸಂಕಷ್ಟ: ಈ ಬಾರಿ ಮಾವಿನ ಇಳುವರಿ ಭಾರೀ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…

8 hours ago

ಬಂಡೀಪುರದಲ್ಲಿ ಮತ್ತೊಂದು ಕಾಡಾನೆ ಸಾವು

ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…

8 hours ago

ಪ್ರಮುಖ ಆಕರ್ಷಣೀಯ ಕೇಂದ್ರವಾಗಿ ಹೊರಹೊಮ್ಮಿದ ಅಯೋಧ್ಯೆ ರಾಮಮಂದಿರ

ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್‌ ಒನ್‌ ಪಟ್ಟ ಪಡೆದಿದೆ. ಈ ಮೂಲಕ ಈಗ…

8 hours ago

ಪ್ರವಾಸಿಗರಿಗೆ ಬಿಗ್‌ ಶಾಕ್: ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್‌

ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್‌ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್‌ ಶಾಕ್‌ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…

8 hours ago