ಮಡಿಕೇರಿ: ಕುಶಾಲನಗರ ತಾಲ್ಲೂಕಿನ ಅತ್ತೂರು ನಲ್ಲೂರು ಗ್ರಾಮದಲ್ಲಿ ಶುಕ್ರವಾರ ಕಾಡಾನೆಯೊಂದನ್ನು ಸೆರೆ ಹಿಡಿಯುವ ವೇಳೆ ಅದು 32 ಅಡಿ ಆಳದ ಹಳ್ಳಕ್ಕೆ ಬಿದ್ದು ಮೃತಪಟ್ಟಿದೆ. ಸುಮಾರು 20 ವರ್ಷ ವಯಸ್ಸಿನ ಗಂಡಾನೆ ಇದಾಗಿದ್ದು, ಸುತ್ತಮುತ್ತಲ ಪ್ರದೇಶದ ರೈತರ ಮೇಲೆ ದಾಳಿ ನಡೆಸುತ್ತಿತ್ತು. ವ್ಯಕ್ತಿಯೊಬ್ಬರು ಆನೆ ದಾಳಿಗೆ ಸಿಲುಕಿ ಮೃತಪಟ್ಟಿದ್ದರು.
ಕಾಡಾನೆಯನ್ನು ಹಿಡಿಯಲು ಶುಕ್ರವಾರ ಬೆಳಗ್ಗಿನಿಂದಲೇ ಕಾರ್ಯಾಚರಣೆ ಆರಂಭವಾಗಿತ್ತು.ಆನೆಯನ್ನು ಕಂಡ ಕೂಡಲೇ ಅರಿವಳಿಕೆ ಚುಚ್ಚು ಮದ್ದು ನೀಡಲಾಗಿತ್ತು. ಆದರೆ ಅರಿವಳಿಕೆ ಚುಚ್ಚಿಸಿಕೊಂಡ ಬಳಿಕ ಓಡಲು ಪ್ರಯತ್ನಿಸಿದ ಆನೆ ಸುಮಾರು 30 ಅಡಿ ಆಳದ ಸಿಮೆಂಟ್ ಅಂಗಳಕ್ಕೆ ಬಿದ್ದಿದೆ. ಈ ಕುರಿತು ಪ್ರತಿಕ್ರಿಯಿಸಿದ ಆನೆ ಕಾರ್ಯಪಡೆಯ ಡಿಸಿಎಫ್ ಪೂವಯ್ಯ, “” ಅರಿವಳಿಕೆ ಚುಚ್ಚುಮದ್ದು ನೀಡಿದ ನಂತರ ಆನೆಯು ಸ್ಥಳದಿಂದ ಓಡಿತು. ಸ್ವಲ್ಪ ದೂರ ಸಾಗಿದ ನಂತರ ಆಕಸ್ಮಿಕವಾಗಿ 32 ಅಡಿ ಆಳದ ಹಳ್ಳಕ್ಕೆ ಬಿದ್ದು, ತೀವ್ರವಾಗಿ ಗಾಯಗೊಂಡಿದೆ. ಬಿದ್ದ ರಭಸಕ್ಕೆ ಆನೆಯ ಒಳಾಂಗಗಳು ವಿಫಲಗೊಂಡು, ಸ್ಥಳದಲ್ಲೇ ಮೃತಪಟ್ಟಿತು. ಆನೆಯ ಬಲಗಣ್ಣಿನ ದೃಷ್ಟಿ ಕಡಿಮೆ ಇದ್ದ ಕಾರಣ ಗುಂಡಿ ಕಾಣಿಸಿರಲಿಲ್ಲ ಎನಿಸುತ್ತದೆ. ಸದ್ಯ, ಮೀನುಕೊಲ್ಲಿಯಲ್ಲಿ ಇದರ ಮರಣೋತ್ತರ ಪರೀಕ್ಷೆ ನಡೆಸಿ, ಅಂಗಾಂಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗುವುದುʼʼ ಎಂದು ತಿಳಿಸಿದ್ದಾರೆ.
ಕಳೆದ ವರ್ಷ ಜೂನ್ ಒಂದರಂದು ವಿರಾಜಪೇಟೆ ತಾಲ್ಲೂಕಿನ ಮರಂದೋಡ ಗ್ರಾಮ ವ್ಯಾಪ್ತಿಯಲ್ಲಿ 35 ವರ್ಷ ಪ್ರಾಯದ ಹೆಣ್ಣಾನೆಯು ಸೆರೆ ಕಾರ್ಯಾಚರಣೆ ವೇಳೆ ಮೃತಪಟ್ಟಿತ್ತು. ಪಳಗಿದ 5 ಆನೆಗಳ ಸಹಾಯದೊಂದಿಗೆ ಆನೆಯನ್ನು ʼಟ್ರಕ್’ಗೆ ಹತ್ತಿಸಲಾಗಿತ್ತು. ಆದರೆ, ಮಾರ್ಗದ ಮಧ್ಯೆಯೇ ಆನೆ ಹೃದಯಾಘಾತದಿಂದ ಮೃತಪಟ್ಟಿತ್ತು.
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…