ಮೈಸೂರು: ಫೆ.8ರಂದು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆಯುವ ರಾಷ್ಟ್ರೀಯ ಕ್ರೀಡಾ ಉತ್ಸವ ‘ಖೇಲೋ ಇಂಡಿಯಾ ಯೂತ್ ಗೇಮ್ಸ್’ನಲ್ಲಿ ಮೈಸೂರಿನ ವರ್ಷ(13 ವರ್ಷ) ಮತ್ತು ನಮ್ರತಾ (9 ವರ್ಷ) ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ ಎಂದು ಕಳರಿ ಸಾಧನ ಮುಖ್ಯಸ್ಥ ವರುಣ್ ಯಾದವ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಇಬ್ಬರು ಹೆಣ್ಣುಮಕ್ಕಳು ಕಳರಿ ಪಯಟ್ಟು ವಿಭಾಗದಲ್ಲಿ ಮೈಸೂರಿನಿಂದ ಪ್ರತಿನಿಧಿಸುತ್ತಿರುವ ಮೊದಲ ಕ್ರೀಡಾಪಟುಗಳಾಗಿದ್ದಾರೆ. ಕರ್ನಾಟಕದಿಂದ 18 ಮಂದಿ ಸ್ಪರ್ಧಿಗಳು ಪಾಲ್ಗೊಳ್ಳಲಿದ್ದು, 16 ಮಂದಿ ಬೆಂಗಳೂರು ಮೂಲದವರು ಮತ್ತು ಇಬ್ಬರು ಮೈಸೂರಿನ ಕುವರಿಯರು ಎಂದು ವಿವರಿಸಿದರು. ಈ ಸ್ಪರ್ಧೆಯು ಸಬ್ ಜೂನಿಯರ್ ಗರ್ಲ್ಸ್ ಮತ್ತು ಜೂನಿಯರ್ ಗರ್ಲ್ಸ್ ವಿಭಾಗದಲ್ಲಿ ನಡೆಯುತ್ತದೆ. ಪರಸ್ಪರ ಕಾದಾಟ ಇರುವುದಿಲ್ಲ, ಕಲೆಯ ಪ್ರದರ್ಶನವಿರುತ್ತದೆ ಎಂದು ತಿಳಿಸಿದರು.
ಕಳರಿ ಪಟುಗಳಾದ ವರ್ಷ ಮತ್ತು ನಮ್ರತಾ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…
ಮೈಸೂರು: ಮುಡಾ 50:50 ಸೈಟ್ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…
ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…
ನವದೆಹಲಿ: ಬ್ಯಾಂಕ್ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್ ಸೇವೆಗಳಲ್ಲಿ…
ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…