ಮೈಸೂರು: ‘ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ವಿಶ್ರಾಂತ ಕನ್ನಡ ಪ್ರಾಧ್ಯಾಪಕ, ಸಾಹಿತಿ, ಜಾನಪದ ವಿದ್ವಾಂಸ ಡಾ.ರಾಮೇಗೌಡ (ರಾಗೌ) ಬೆಂಗಳೂರಿನ ಕನ್ನಡ ಜನಶಕ್ತಿ ಕೇಂದ್ರದಿಂದ ನೀಡುವ ‘ಕುವೆಂಪು ಗೌರವ ಪುರಸ್ಕಾರ’ಕ್ಕೆ ಆಯ್ಕೆಯಾಗಿದ್ದಾರೆ’ ಎಂದು ಕೇಂದ್ರದ ಅಧ್ಯಕ್ಷ ಸಿ.ಕೆ.ರಾಮೇಗೌಡ ತಿಳಿಸಿದ್ದಾರೆ.
‘ಕಾವ್ಯ, ವಿಮರ್ಶೆ, ಸಂಶೋಧನೆ, ಸಂಪಾದನೆ ಹಾಗೂ ಜಾನಪದ ಸಾಹಿತ್ಯ ಪ್ರಾಕಾರಗಳಲ್ಲಿ ನಲವತ್ತಕ್ಕೂ ಅಧಿಕ ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ತಮ್ಮ ಕೃತಿಗಳ ಮೂಲಕ ಕನ್ನಡ ಸಾರಸ್ವತ ಲೋಕಕ್ಕೆ ಹೊಸ ಕಸುವು ತುಂಬಿದ್ದಾರೆ. ಸಾಹಿತ್ಯ, ಸಂಶೋಧನೆ ಹಾಗೂ ಜಾನಪದ ಕ್ಷೇತ್ರಕ್ಕೆ ನೀಡಿರುವ ಕೊಡುಗೆ ಪರಿಗಣಿಸಿ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ. ಡಿ.18ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆಯುವ ‘ಕುವೆಂಪು ದರ್ಶನ ಮತ್ತು ಪ್ರಸ್ತುತತೆ’ ವಿಚಾರಸಂಕಿರಣದ ಸಮಾರೋಪದಲ್ಲಿ ಪ್ರದಾನ ಮಾಡಲಾಗುವುದು’ ಎಂದು ತಿಳಿಸಿದ್ದಾರೆ. ಅವರನ್ನು ಸಾಹಿತಿ ಟಿ.ಸತೀಶ್ ಜವರೇಗೌಡ ಅಭಿನಂದಿಸಿದ್ದಾರೆ.
Mysuru
Kuvempu
ಚಾಮರಾಜನಗರ : ತಾಲ್ಲೂಕಿನ ನಂಜೇದೇವಪುರ ಬಳಿ ನಾಲ್ಕು ಮರಿಗಳ ಜೊತೆ ತಾಯಿ ಹುಲಿ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಅವುಗಳ ಸೆರೆಗಾಗಿ ಕೂಂಬಿಂಗ್…
ಮೈಸೂರು : ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ ಗುರುವಾರ ಅಧಿಕಾರ ಸ್ವೀಕಾರ ಮಾಡಿದರು. ಮಂಡ್ಯ ಜಿಲ್ಲೆಯ ಎಸ್‌ಪಿ…
ಗುಂಡ್ಲುಪೇಟೆ: ತಾಲ್ಲೂಕಿನ ಅಭಿವೃದ್ಧಿಗೆ ಶ್ರಮಿಸಿ ಏಳು ಬಾರಿ ಶಾಸಕಿ ,ಸಚಿವೆಯಾಗಿ ಮೊದಲ ಮಹಿಳಾ ಸ್ಪೀಕರ್ ಆದಂತಹ ಗಟ್ಟಿಗಿತ್ತಿ ಕೆ.ಎಸ್.ನಾಗರತ್ನಮ್ಮ ಅವರ…
ಗುಂಡ್ಲುಪೇಟೆ: ಪಟ್ಟಣದ ಕೂತನೂರು ಗುಡ್ಡ ಹಾಗೂ ತೆರಕಣಾಂಬಿ ಭಾಗದಿಂದ ಅಧಿಕ ಭಾರಹೊತ್ತು ಸಾಗುವ ಟಿಪ್ಪರ್ ಗಳ ಸಂಚಾರ ನಡೆಸುತಿದ್ದರು ಆರ್…
ಗುಂಡ್ಲುಪೇಟೆ: ಮೋಟರ್ ಆನ್ ಮಾಡುವ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ಕೂಲಿ ಕಾರ್ಮಿಕ ಮೃತಪಟ್ಟಿರುವ ಘಟನೆ ತಾಲೂಕಿನ ತೆರಕಣಾಂಬಿ ಗ್ರಾಮದ ತೋಟವೊಂದರಲ್ಲಿ…
ಬೆಂಗಳೂರು : 2026ರ ಹೊಸವರ್ಷವನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲಾಗಿದೆ. ರಾಜ್ಯದಲ್ಲಿ ಯಾವುದೆ ಅಹಿತಕರ ಘಟನೆ ನಡೆಯದೆ ಸುರಕ್ಷಿತವಾಗಿ ಹೊಸ ವರ್ಷಕ್ಕೆ ಕಾಲಿಟ್ಟಿದ್ದೇವೆ.…