ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ವಿಶ್ವಕೋಶ ಯೋಜನೆಯ ಗೌರವ ವಿಜ್ಞಾನ ಸಂಪಾದಕ, ವಿಜ್ಞಾನ ಲೇಖಕ ಹಾಗೂ ವಿಶ್ರಾಂತ ಪ್ರಾಂಶುಪಾಲ ಸಾತನೂರು ದೇವರಾಜು ಅವರಿಗೆ ಕರ್ನಾಟಕ ರಕ್ಷಣಾ ವೇದಿಕೆ -ವೀರ ಕನ್ನಡಿಗರ ಘರ್ಜನೆ ಮಂಡ್ಯ ಜಿಲ್ಲಾ ಘಟಕದ ವತಿಯಿಂದ ನೀಡಲಾಗುವ ‘ಕುವೆಂಪು ಗೌರವ ಪುರಸ್ಕಾರ’ ದೊರೆತಿದೆ.
ಮೂರು ದಶಕಗಳಿಂದ ಬರೆವಣಿಗೆಯ ಕೃಷಿಯಲ್ಲಿ ತೊಡಗಿರುವ ಸಾತನೂರು ದೇವರಾಜ್ ಅವರ ಸೇವಾ ಸಾಧನೆಯನ್ನು ಪರಿಗಣಿಸಿ ಸಾಹಿತಿ ಟಿ.ಸತೀಶ್ ಜವರೇಗೌಡ ಅವರ ನೇತೃತ್ವದ ಸಮಿತಿ ಈ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಜ.8ರಂದು ಬೆಳಿಗ್ಗೆ 10.30ಕ್ಕೆ ಮಂಡ್ಯ ನಗರದ ಹರ್ಡೀಕರ್ ಭವನದಲ್ಲಿ ನಡೆಯಲಿರುವ ‘ವಿಶ್ವಮಾನವ ಕುವೆಂಪು ಹಬ್ಬ’ದಲ್ಲಿ ಕುವೆಂಪು ಗೌರವ ಪುರಸ್ಕಾರ ನೀಡಲಾಗುವುದು. ವಿದ್ವಾಂಸರಾದ ಡಾ. ಸಿಪಿಕೆ, ಮಂಡ್ಯ ಜಿಲ್ಲಾ ಯುವ ಬರಹಗಾರರ ಬಳಗದ ಅಧ್ಯಕ್ಷ ಟಿ.ಸತೀಶ್ ಜವರೇಗೌಡ ಪಾಲ್ಗೊಳ್ಳುವರು.
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…