ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದಲ್ಲಿ ದನಗಾಹಿಯ ಮೇಲೆ ದಾಳಿ ಮಾಡಿ ಕೊಂದು ಹಾಕಿದ್ದ ಚಿರತೆ ಗ್ರಾಮದಲ್ಲಿ ಪುನಃ ಕಾಣಿಸಿಕೊಂಡಿದ್ದು ಗ್ರಾಮಸ್ಥರಲ್ಲಿ ಆತಂಕವನ್ನುಂಟು ಮಾಡಿದೆ.
ಜಾನುವಾರು ಮೇಯಿಸಲು ಹೋಗಿದ್ದ ಕೆವಿಎನ್ ದೊಡ್ಡಿ ಗ್ರಾಮದ ಗೋವಿಂದಯ್ಯ ಎಂಬುವವರ ಮೇಲೆ ಚಿರತೆ ದಾಳಿ ಮಾಡಿತ್ತು. ತೀವ್ರವಾಗಿ ಗಾಯಗೊಂಡಿದ್ದ ಗೋವಿಂದಯ್ಯ ಸ್ಥಳದಲ್ಲೇ ಮೃತಪಟ್ಟಿದ್ದರು. ದನಗಾಹಿಯ ಮೇಲೆ ದಾಳಿ ಮಾಡಿರುವ ಚಿರತೆಯನ್ನು ಹಿಡಿದು ಬೇರೆಡೆ ಬಿಡುವಂತೆ ಗ್ರಾಮಸ್ಥರಿಂದ ವ್ಯಾಪಕ ಒತ್ತಾಯ ಕೇಳಿ ಬಂದಿತ್ತು.
ಬಳಿಕ ಶಾಸಕ ಆರ್. ನರೇಂದ್ರ ಹಾಗೂ ಅರಣ್ಯಾಧಿಕಾರಿಗಳು ಮೃತರ ಮನೆಗೆ ತೆರಳಿ ಸಾಂತ್ವನ ಹೇಳುವುದರ ಜತೆಗೆ ಚಿರತೆ ಹಿಡಿಯಲು ಕಾರ್ಯಚರಣೆ ಆರಂಭಿಸಲಾಗಿದ್ದು, ಗ್ರಾಮಸ್ಥರು ಸಹ ಇದಕ್ಕೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದರು. ಮರುದಿನವೇ ಕಾರ್ಯಚರಣೆ ಆರಂಭಿಸಿ ಅರಣ್ಯ ಇಲಾಖೆ ಚಿರತೆ ದಾಳಿ ಮಾಡಿದ್ದ ಪ್ರದೇಶ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಕ್ಯಾಮರಾ ಹಾಗೂ ಬೋನ್ ಗಳನ್ನು ಅಳವಡಿಸಿ ಚಿರತೆ ಚಲನವಲನಗಳನ್ನು ಪರಿಶೀಲನೆ ನಡೆಸುತ್ತಿದೆ. ಹೀಗಿದ್ದರೂ ಬುಧವಾರ ಮತ್ತೆ ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿರುವುದು ಗ್ರಾಮಸ್ಥರು ಮತ್ತಷ್ಟು ಭಯಭೀತರನ್ನಾಗುವಂತೆ ಮಾಡಿದೆ. ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿರುವುದಾಗಿ ಗ್ರಾಮಸ್ಥರು ಹೇಳುತ್ತಿದ್ದಾರೆ. ಇದನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಕಾರ್ಯಾಚರಣೆ ಮತ್ತಷ್ಟು ಚುರುಕುಗೊಳಿಸಲಾಗುವುದು ಎಂದು ಎಸಿಎಫ್ ಎಂ.ಎನ್ ಅಂಕರಾಜು ತಿಳಿಸಿದರು.
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಾಳೆ 9ನೇ ಬಾರಿಗೆ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಮೂಲಕ…
ಬೆಂಗಳೂರು: ಖ್ಯಾತ ಉದ್ಯಮಿ ಮತ್ತು ಕಾನ್ಪಿಡೆಂಟ್ ಗ್ರೂಪ್ ಸಂಸ್ಥಾಪಕ ಹಾಗೂ ಅಧ್ಯಕ್ಷರಾಗಿದ್ದ ಸಿ.ಜೆ.ರಾಯ್ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು,…
ಮೈಸೂರು ನಗರದಲ್ಲಿ ಮಳೆನೀರು ಕೊಯ್ಲು ಥೀಮ್ ಪಾರ್ಕ್ ಸ್ಥಾಪಿಸುವ ಹಿಂದಿನ ಹಾಗೂ ಈಗಿನ ಸರ್ಕಾರಗಳ ಭರವಸೆ ಇನ್ನೂ ಕನ್ನಡಿಯೊಳಗಿನ ಗಂಟಾಗಿಯೇ…
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಹರಳಹಳ್ಳಿಯ ಪುಸ್ತಕ ಪ್ರೇಮಿ ೭೮ ವರ್ಷದ ಅಂಕೇಗೌಡ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿರುವುದು ಕನ್ನಡ…
ಮೈಸೂರಿನ ರಾಮಕೃಷ್ಣನಗರ ಮಾರ್ಗಕ್ಕೆ ಪ್ರತಿದಿನ ನಗರ ಸಾರಿಗೆ ಬಸ್ಸುಗಳು ಸಂಚರಿಸುತ್ತವೆ. ಆದರೆ ಈ ಮಾರ್ಗದಲ್ಲಿ ಓಡಾಡುವ ಬಸ್ಸುಗಳ ಸಂಖ್ಯೆ ಮಾತ್ರ…
ಸರಗೂರು: ಪಟ್ಟಣದಲ್ಲಿ ಗ್ರಾಮದೇವತೆ ಶ್ರೀ ಸಂತೆ ಮಾಸ್ತಮ್ಮನವರ ೩೧ನೇ ಜಾತ್ರಾ ಮಹೋತ್ಸವ ಹಾಗೂ ಕೊಂಡೋತ್ಸವ ಶುಕ್ರವಾರ ವಿಜೃಂಭಣೆಯಿಂದ ನೆರವೇರಿತು. ಜಾತ್ರಾ…