ಮೈಸೂರು : ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕಪಡೆದು ಉತ್ತೀರ್ಣರಾಗಿರುವ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸರ್ಕಾರದ ವತಿಯಿಂದ ಕೊಡಮಾಡುವ ಲ್ಯಾಪ್ ಟಾಪ್ ಗಳನ್ನು ಇಂದು ಮೈಸೂರಿನ ಕಲಾಮಂದಿರದಲ್ಲಿ ಶಾಸಕ ಎಲ್. ನಾಗೇಂದ್ರ ಅವರು ನಾಲ್ವರು ವಿದ್ಯಾರ್ಥಿಗಳಿಗೆ ವಿತರಿಸಿ ಶುಭ ಹಾರೈಸಿದರು.
ಸರ್ಕಾರಿ ವಿಭಜಿತ ಮಹಾರಾಜ ಪದವಿ ಪೂರ್ವ ಕಾಲೇಜಿನ ಹೆಚ್. ಪಿ. ರೂಪೇಶ್, ವಿನಾಯಕ ನಗರ ಸರ್ಕಾರಿ ಪ್ರೌಢ ಶಾಲೆಯ ಎಸ್. ಸೌಜನ್ಯ, ಆರ್. ಮಮತ ಹಾಗೂ ಕುಂಬಾರ ಕೊಪ್ಪಲು ಸರ್ಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಎಸ್. ಶ್ರೀಶಾಂತ್ ಅವರಿಗೆ ಲ್ಯಾಪ್ ಟಾಪ್ ವಿತರಿಸಿದರು.