Mysore
26
few clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ಹಾಸನ: ಕಾಡಾನೆ ದಾಳಿಗೆ ಕಾರ್ಮಿಕ ಸಾವು; ಶಾಶ್ವತ ಪರಿಹಾರಕ್ಕಾಗಿ ರಸ್ತೆತಡೆ

ವನ್ಯಜೀವಿಗಳ ದಾಳಿಗೆ ಜನರು ಮೃತಪಡುತ್ತಿರುವ ಘಟನೆಗಳು ಹೆಚ್ಚಾಗುತ್ತಲೇ ಇವೆ. ಇದೀಗ ಹಾಸನದ ಬೇಲೂರು ತಾಲೂಕಿನ ಮತ್ತಾವರ ಗ್ರಾಮದ ಬಳಿ ಕಾಡಾನೆ ದಾಳಿಗೆ ವಸಂತ್‌ ಎಂಬ ಕಾರ್ಮಿಕ ಮೃತಪಟ್ಟಿದ್ದಾರೆ.

ಇನ್ನು ಈ ಪ್ರದೇಶದಲ್ಲಿ ಈಗಾಗಲೇ ಅನೇಕ ಅಮಾಯಕರು ಕಾಡು ಪ್ರಾಣಿಗಳ ದಾಳಿಗಳಿಂದಾಗಿ ಜೀವ ಕಳೆದುಕೊಂಡಿದ್ದು ಅರಣ್ಯ ಇಲಾಖೆ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿ ಪ್ರತಿಭಟನೆ ನಡೆಸಿದರು. ಶವ ಇಟ್ಟು ಪ್ರತಿಭಟನೆ ನಡೆಸಿದ ಮೃತನ ಕುಟುಂಬಸ್ಥರು ಹಾಗೂ ಸ್ಥಳೀಯರು ಕೂಡಲೇ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಸ್ಥಳಕ್ಕೆ ಆಗಮಿಸಬೇಕು, ಈ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಸ್ಥಳದಲ್ಲಿ ಸುಮಾರು 500ಕ್ಕೂ ಹೆಚ್ಚು ಜನರು ಜಮಾಯಿಸಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದು, ಬೇಲೂರು ಶಾಸಕ ಹುಲ್ಲಹಳ್ಳಿ ಸುರೇಶ್‌, ಜಿಲ್ಲಾಧಿಕಾರಿ ಸಿ ಸತ್ಯಭಾಮ, ಪೊಲೀಸ್‌ ವರಿಷ್ಠಾಧಿಕಾರಿ ಮೊಹಮ್ಮದ್‌ ಸುಜೀತಾ ಹಾಗೂ ಹಲವು ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾನಿರತರ ಮನವೊಲಿಸುವ ಯತ್ನ ನಡೆಸಿದರು. ಇದಕ್ಕೆ ಬಗ್ಗದ ಪ್ರತಿಭಟನಾಕಾರರು ಅರಣ್ಯ ಸಚಿವರು ಹಾಗೂ ಇಲಾಖೆಯ ಮೇಲಾಧಿಕಾರಿಗಳು ಆಗಮಿಸಲೇಬೇಕು, ಅಲ್ಲಿಯವರೆಗೂ ಮೃತದೇಹ ಎತ್ತುವುದಿಲ್ಲ ಎಂದು ಪ್ರತಿಭಟನೆ ಮುಂದುವರಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ