ವನ್ಯಜೀವಿಗಳ ದಾಳಿಗೆ ಜನರು ಮೃತಪಡುತ್ತಿರುವ ಘಟನೆಗಳು ಹೆಚ್ಚಾಗುತ್ತಲೇ ಇವೆ. ಇದೀಗ ಹಾಸನದ ಬೇಲೂರು ತಾಲೂಕಿನ ಮತ್ತಾವರ ಗ್ರಾಮದ ಬಳಿ ಕಾಡಾನೆ ದಾಳಿಗೆ ವಸಂತ್ ಎಂಬ ಕಾರ್ಮಿಕ ಮೃತಪಟ್ಟಿದ್ದಾರೆ.
ಇನ್ನು ಈ ಪ್ರದೇಶದಲ್ಲಿ ಈಗಾಗಲೇ ಅನೇಕ ಅಮಾಯಕರು ಕಾಡು ಪ್ರಾಣಿಗಳ ದಾಳಿಗಳಿಂದಾಗಿ ಜೀವ ಕಳೆದುಕೊಂಡಿದ್ದು ಅರಣ್ಯ ಇಲಾಖೆ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿ ಪ್ರತಿಭಟನೆ ನಡೆಸಿದರು. ಶವ ಇಟ್ಟು ಪ್ರತಿಭಟನೆ ನಡೆಸಿದ ಮೃತನ ಕುಟುಂಬಸ್ಥರು ಹಾಗೂ ಸ್ಥಳೀಯರು ಕೂಡಲೇ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸ್ಥಳಕ್ಕೆ ಆಗಮಿಸಬೇಕು, ಈ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಬೇಕು ಎಂದು ಪಟ್ಟು ಹಿಡಿದಿದ್ದಾರೆ.
ಸ್ಥಳದಲ್ಲಿ ಸುಮಾರು 500ಕ್ಕೂ ಹೆಚ್ಚು ಜನರು ಜಮಾಯಿಸಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದು, ಬೇಲೂರು ಶಾಸಕ ಹುಲ್ಲಹಳ್ಳಿ ಸುರೇಶ್, ಜಿಲ್ಲಾಧಿಕಾರಿ ಸಿ ಸತ್ಯಭಾಮ, ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ ಹಾಗೂ ಹಲವು ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾನಿರತರ ಮನವೊಲಿಸುವ ಯತ್ನ ನಡೆಸಿದರು. ಇದಕ್ಕೆ ಬಗ್ಗದ ಪ್ರತಿಭಟನಾಕಾರರು ಅರಣ್ಯ ಸಚಿವರು ಹಾಗೂ ಇಲಾಖೆಯ ಮೇಲಾಧಿಕಾರಿಗಳು ಆಗಮಿಸಲೇಬೇಕು, ಅಲ್ಲಿಯವರೆಗೂ ಮೃತದೇಹ ಎತ್ತುವುದಿಲ್ಲ ಎಂದು ಪ್ರತಿಭಟನೆ ಮುಂದುವರಿಸಿದ್ದಾರೆ.
ಕಾಡಾನೆಗಳ ಹಾವಳಿಯಿಂದಾಗಿ ಕಾಡಂಚಿನ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಆನೆಗಳನ್ನು ಕೊಲ್ಲಲು ಅನುಮತಿ ನೀಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ…
ರಾಜ್ಯಸಭೆಯ ಕಲಾಪದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುವ ಭರದಲ್ಲಿ ಕೆಲವರು ಅಂಬೇಡ್ಕರ್ ಎನ್ನುವುದನ್ನು ಈಗ ಫ್ಯಾಷನ್…
ದಾ.ರಾ. ಮಹೇಶ್ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…
ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20,21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ…
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…