ಕೊಳ್ಳೇಗಾಲ: ಗೃಹಿಣಿಯೊಬ್ಬರು ರಸ್ತೆಯಲ್ಲಿ ಹೋಗುತ್ತಿದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಅವರ ಮೊಬೈಲ್ ಮತ್ತು ಪರ್ಸ್ ಅನ್ನು ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ.
ಇಲ್ಲಿನ ಅನುಪಮ ಬಾರ್ ಅಂಡ್ ರೆಸ್ಟೋರೆಂಟ್ ಮಾಲೀಕ ಯೋಗಚಂದ್ರ ಅವರ ಪತ್ನಿ ಶೋಭ ಅವರು ಮೊಬೈಲ್, ಪರ್ಸ್ ಕಳೆದುಕೊಂಡವರು.
ಜನನಿ ಆಸ್ಪತ್ರೆಯ ಬಳಿ ಫೋನ್‌ನಲ್ಲಿ ಮಾತನಾಡಿಕೊಂಡು ಹೋಗುವಾಗ ಇಬ್ಬರು ಬೈಕ್ ಸವಾರರು ಹಿಂದಿನಿಂದ ಬಂದು ಮೊಬೈಲ್ ಹಾಗೂ ಪರ್ಸನ್ನು ಎಗರಿಸಿಕೊಂಡು ಪರಾರಿಯಾಗಿದ್ದಾರೆ.
ತಕ್ಷಣ ಇವರು ಪೊಲೀಸ್ ಠಾಣೆಗೆ ಬಂದು ಈ ಸಂಬಂಧ ದೂರು ಸಲ್ಲಿಸಿದಾಗ ಪೊಲೀಸರು ತಕ್ಷಣ ಅಲ್ಲಿದ್ದ ಸಿಸಿ ಟಿವಿ ಮಾಹಿತಿ ಸಂಗ್ರಹಿಸಿ ಕಳ್ಳರ ಮಾಹಿತಿಗಳನ್ನು ಪಡೆದು, ಆರೋಪಪಿ ಗುರುಪ್ರಸಾದ್ ಅಲಿಯಾಸ್ ಕೂಳೆ ಎಂಬಾತನನ್ನು ಬಂಧಿಸಿ ಈತನಿಂದ ಎಗರಿಸಿದ್ದ ಮೊಬೈಲ್ ಹಾಗೂ ಪರ್ಸನ್ನು ಹಾಗೂ ಬೈಕ್ ನ್ನು ವಶಪಡಿಸಿಕೊಂಡಿದ್ದಾರೆ.
ಮತ್ತೊಬ್ಬ ಆರೋಪಿ ಗುರು ಅಲಿಯಾಸ್ ಡಾಲಿ ತಲೆ ಮರೆಸಿಕೊಂಡಿದ್ದಾನೆ. ಗುರುಪ್ರಸಾದ್‌ಗೆ ನ್ಯಾಯಾಧೀಶರು ೧೫ ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಅಪರಾಧ ವಿಭಾಗದ ಎಸ್‌ಐ ಉಮಾವತಿ ತನಿಖೆ ನಡೆಸುತ್ತಿದ್ದಾರೆ.
ಮೈಸೂರು ನಗರದ ರಿಂಗ್ ರಸ್ತೆಯಲ್ಲಿರುವ ಹಂಚ್ಯಾ-ಸಾತಗಳ್ಳಿ ‘ಬಿ’ ವಲಯದಲ್ಲಿ (ವಿಟಿಯು ಕಾಲೇಜು ಬಳಿ) ಬೀದಿ ನಾಯಿಗಳ ಹಾವಳಿ ವಿಪರೀತವಾಗಿದ್ದು, ಸ್ಥಳೀಯ…
ತಾಣ..ಬಾಣ ! ಬೇಕಿದ್ದರೆ ಬಿಟ್ಟೇವು ಒಂದಲ್ಲ, ಎರಡು ದಿನ.. ಶಾಲಾ ತಾಣ! ಬಿಟ್ಟಿರುವುದು ಹೇಗೆ ? ಸಾಮಾಜಿಕ ಜಾಲತಾಣ ಎಂಬುದು…
ಮೈಸೂರಿನ ಬೋಗಾದಿ -ಗದ್ದಿಗೆ ಜೋಡಿ ರಸ್ತೆಯಲ್ಲಿ ವಾಹನಗಳ ಸಂಚಾರ ಹೆಚ್ಚಾಗಿದ್ದರಿಂದ ದಾಸನಕೊಪ್ಪಲು ಬಸ್ ನಿಲ್ದಾಣದ ಬಳಿ ಎರಡು ಕಡೆಯೂ ಒಂದು…
ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದ ಸನಿಹದಲ್ಲಿ ಹರಿಯುವ ಕಪಿಲಾ ನದಿ ತೀರದಲ್ಲಿ ಪುಣ್ಯ ಸ್ನಾನ ಮಾಡುವವರು ಬಟ್ಟೆಗಳನ್ನು ಅಲ್ಲಿಯೇ ಬಿಟ್ಟು ಹೋಗುವುದರಿಂದ…
ಬಿಹಾರ ವಿಧಾನಸಭೆಗೆ ಚುನಾವಣೆ ನಡೆದು ಮೂರೂವರೆ ತಿಂಗಳಾಗುವಷ್ಟರಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆಗೆ ಏಕಿಷ್ಟು ಆತುರ? ಏನು ಕಾರಣ ಎನ್ನುವುದಕ್ಕೆಲ್ಲ ಉತ್ತರ…
ಕೃಷ್ಣ ಸಿದ್ದಾಪುರ ತೋಟದ ಮಾಲೀಕನ ದೌರ್ಜನ್ಯಕ್ಕೆ ತುತ್ತಾದ ೮ ಕುಟುಂಬಗಳ ೨೬ ಮಂದಿ ರಕ್ಷಣೆ; ಸಾಬೀತಾಗದ ಆರೋಪ ಸಿದ್ದಾಪುರ: ವ್ಯವಸ್ಥೆಯಲ್ಲಿ ಶತಮಾನಗಳಿಂದ…