Mysore
24
broken clouds

Social Media

ಸೋಮವಾರ, 23 ಡಿಸೆಂಬರ್ 2024
Light
Dark

ಕೆರೆ ಕೋಡಿಬಿದ್ದು ಮನೆಗಳಿಗೆ ಹಾನಿ : ಶಾಸಕ ಆರ್ ನರೇಂದ್ರ ಸ್ಥಳ ಪರಿಶೀಲನೆ

ಹನೂರು: ಗುರುವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕೆರೆ ಕೋಡಿ ಬಿದ್ದು ಮನೆಗಳಿಗೆ ನೀರು ನುಗ್ಗಿದ್ದ ಸ್ಥಳಗಳಿಗೆ ಶಾಸಕ ಆರ್ ನರೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು .


ಕಳೆದ 3ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆ ಹಾಗೂ ಉಡುತೊರೆ ಜಲಾಶಯ ದಿಂದ ಅತಿ ಹೆಚ್ಚು ನೀರು ಬಿಟ್ಟ ಪರಿಣಾಮ ಕುರುಬರ ದೊಡ್ಡಿ ಗ್ರಾಮದ ವಿವಿಧ ಬಡಾವಣೆಗಳ ಮನೆಗಳಿಗೆ ನೀರು ನುಗ್ಗಿ ದಿನಸಿ ಪದಾರ್ಥಗಳು ಸೇರಿದಂತೆ ಗೃಹೋಪಯೋಗಿ ವಸ್ತುಗಳು ಹಾನಿಯಾಗಿದ್ದವು.
ಈ ಹಿನ್ನೆಲೆ ಶಾಸಕ ಆರ್ ನರೇಂದ್ರ ಶುಕ್ರವಾರ ಗ್ರಾಮಕ್ಕೆ ಭೇಟಿ ನೀಡಿ ಅಧಿಕಾರಿಗಳ ಜೊತೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದಲ್ಲದೆ ಜೆಸಿಬಿಯನ್ನು ಕರೆಸಿ ಮಳೆಯ ನೀರು ಸರಾಗವಾಗಿ ಹರಿದುಹೋಗಲು ಗಿಡಗಂಟಿಗಳನ್ನು ತೆರವುಗೊಳಿಸಿ ಅನುವು ಮಾಡಿಕೊಡಲಾಯಿತು.
ಈ ಸಂದರ್ಭದಲ್ಲಿ ತಾಪಂ ಮಾಜಿ ಅಧ್ಯಕ್ಷ ಮುರುಡೇಶ್ವರಸ್ವಾಮಿ, ಮುಖಂಡರುಗಳಾದ ಪೊನ್ನಾಚಿ ರಂಗಸ್ವಾಮಿ, ಅಜ್ಜೀಪುರ ನಾಗರಾಜು, ಪಾಳ್ಯ ಕೃಷ್ಣ ಸೇರಿದಂತೆ ಇನ್ನಿತರರು ಹಾಜರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ