ಮೈಸೂರು: ಚಾಮುಂಡಿಬೆಟ್ಟದ ಪಾದದಲ್ಲಿರುವ ಶಬರಿಮಲೆ ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನದ ಪೂಜಾ ಸಮಿತಿ ವತಿಯಿಂದ ಜ.14ರಂದು ಸಂಜೆ 6.30ಕ್ಕೆ ಶಬರಿಮಲೆಯಲ್ಲಿ ಜ್ಯೋತಿ ಕಾಣುವ ಸಮಯದಲ್ಲಿ ಲಕ್ಷ ದೀಪೋತ್ಸವ ಆಯೋಜಿಸಲಾಗಿದೆ ಎಂದು ಸಮಿತಿಯ ಜಂಟಿ ಕಾರ್ಯದರ್ಶಿ ಕೆ.ಎಂ.ಬಸವಾರಾಧ್ಯ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಮಕೃಷ್ಣ ನೈತಿಕ ಮತ್ತು ಆಧ್ಯಾತ್ಮಿಕ ಶಿಕ್ಷಣ ಸಂಸ್ಥೆಯ ಸ್ವಾಮಿ ಶಿವಕಂಠಾನಂದ ಅವರು ದೀಪೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಸಂಸದ ಪ್ರತಾಪ್ ಸಿಂಹ, ಶಾಸಕರಾದ ಎಸ್.ಎ.ರಾಮದಾಸ್, ಜಿ.ಟಿ.ದೇವೇಗೌಡ, ಎಲ್.ನಾಗೇಂದ್ರ, ಮಹಾಪೌರ ಶಿವಕುಮಾರ್, ಮುಡಾ ಅಧ್ಯಕ್ಷ ಯಶಸ್ವಿ ಸೋಮಶೇಖರ್, ಪುಟ್ಟಲಿಂಗಮ್ಮ ಇನ್ನಿತರರು ಭಾಗವಹಿಸಲಿದ್ದಾರೆ. ಇದಕ್ಕೂ ಮುನ್ನ ಸಂಜೆ 5 ಗಂಟೆಗೆ ರಘು ಮತ್ತು ತಂಡದವರಿಂದ ಅಯ್ಯಪ್ಪಸ್ವಾಮಿ ಭಕ್ತಿಗೀತೆ ಗಾಯನ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.
ಕಾರ್ಯದರ್ಶಿ ಆರ್.ಹರಿದಾಸ್, ಖಜಾಂಚಿ ಸುರೇಂದ್ರನ್, ಸದಸ್ಯ ಬಿ.ಎಲ್. ಶಂಕರ್ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…