ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರಿಂದ ನಾಮಕರಣ
ಮೈಸೂರು: ಜಂಬೂಸವಾರಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಹೆಣ್ಣಾನೆ ಲಕ್ಷ್ಮೀಗೆ ಜನಿಸಿದ್ದ ಗಂಡು ಆನೆಗೆ ಶ್ರೀದತ್ತಾತ್ರೇಯ ಹೆಸರನ್ನು ನಾಮಕರಣ ಮಾಡಲಾಗಿದೆ.
ಮಂಗಳವಾರ ರಾತ್ರಿ ದಿಢೀರನೇ ಲಕ್ಷ್ಮೀ ಆನೆಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದ ಅಧಿಕಾರಿಗಳು ತಕ್ಷಣವೇ ಅರಮನೆ ಆನೆ ಲಾಯಕ್ಕೆ ಕರೆತರುವ ಕೆಲಸ ಮಾಡಿತ್ತು. ನಂತರ ಸಂಜೆ 7 ಗಂಟೆಯ ಸಮಯದಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಳು. ಬುಧವಾರ ಲಕ್ಷ್ಮೀ ಮತ್ತು ಪುತ್ರ ಗಂಡು ಆನೆಯ ಆರೋಗ್ಯವನ್ನು ವಿಚಾರಿಸಲು ಆಗಮಿಸಿದ್ದ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರಿಗೆ ಒಂದು ಒಳ್ಳೆಯ ಹೆಸರನ್ನು ಇಡುವಂತೆ ಡಿಸಿಎಫ್ ಡಾ.ವಿ.ಕರಿಕಾಳನ್ ಕೋರಿಕೊಂಡಿದ್ದರು.
ಇದಲ್ಲದೆ,ನಗರಪಾಲಿಕೆ ಸದಸ್ಯ ಲೋಕೇಶ್ ಅವರು ಶ್ರೀಕಂಠದತ್ತ ಎಂಬಹೆಸರನ್ನು ಇಡುವಂತೆ ಮನವಿ ಸಲ್ಲಿಸಿದ್ದರು. ಇದೀಗ ಪ್ರಮೋದಾದೇವಿ ಅವರು ಸೂಚಿಸಿದ್ದ ಶ್ರೀದತ್ತಾತ್ತೇಯ ಎನ್ನುವ ಹೆಸರನ್ನು ನಾಮಕರಣ ಮಾಡಲಾಗಿದೆ.
ಮೈಸೂರು: ಕನ್ನಡ ಚಲನಚಿತ್ರೋದ್ಯಮದ ಉತ್ತಜನ ಹಾಗೂ ಪ್ರೋತ್ಸಾಹಕ್ಕಾಗಿ ರಾಜ್ಯ ಸರ್ಕಾರ ಜಿಲ್ಲೆಗೊಂದು ಮಿನಿ ಚಿತ್ರಮಂದಿರ ನಿರ್ಮಿಸಬೇಕು ಎಂದು ಹಿರಿಯ ಸಾಹಿತಿ…
ಹಾಸನ: ಕೌಟುಂಬಿಕ ಕಲಹದಿಂದ ಪುತ್ರನೇ ತಂದೆಯನ್ನು ಕೊಲೆ ಮಾಡಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಹಿರಿಸಾವೆ ಗ್ರಾಮದಲ್ಲಿ ನಡೆದಿದೆ. ರಾಡ್ನಿಂದ…
ಕೊಡಗು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ಕೊಡಗು ಜಿಲ್ಲೆಯಾದ್ಯಂತ ಜಿಟಿ ಜಿಟಿ ಮಳೆಯಾಗುತ್ತಿದ್ದು, ಜನರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.…
ಮಂಗಳೂರು: ದ್ವೇಷ ಭಾಷಣ ಮಸೂದೆಯನ್ನು ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಇದನ್ನು ವಾಪಸ್ಸು ಕಳಿಸಿಲ್ಲ, ತಿರಸ್ಕರಿಸಿಲ್ಲ ಅಥವಾ ಅಂಕಿತವನ್ನೂ ಹಾಕಿಲ್ಲ. ಅವರು…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತವಾಗಿದ್ದು, ರಾಜ್ಯದಲ್ಲಿ ಮುಂದಿನ 24 ಗಂಟೆಯಲ್ಲಿ ಶೀತಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಬೆಂಗಳೂರು: ಪ್ರಸಿದ್ಧ ಕಾದಂಬರಿಕಾರ್ತಿ ಹಾಗೂ ಪ್ರಕಾಶಕಿಯಾಗಿದ್ದ ಆಶಾ ರಘು ಅವರು ಬೆಂಗಳೂರಿನ ಮಲ್ಲೇಶ್ವರಂನ ತಮ್ಮ ನಿವಾಸದಲ್ಲಿ ಶುಕ್ರವಾರ ರಾತ್ರಿ ನೇಣುಬಿಗಿದುಕೊಂಡು…